ಯೋಗಾಭ್ಯಾಸ ಮಾಡಿ ಆರೋಗ್ಯಕರ ಜಗತ್ತನ್ನು ಸೃಷ್ಟಿಸೋಣ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಬೆಂಗಳೂರು : ಯೋಗಾಭ್ಯಾಸವು ನಮ್ಮನ್ನು ಅಹಿಂಸೆ, ಕರುಣೆ ಮತ್ತು ಶಾಂತಿಯ ಕಡೆಗೆ ಕೊಂಡೊಯ್ಯುತ್ತದೆ, ಇವು ಭೂಮಿಯ ಸುಸ್ಥಿರ ಅಭಿವೃದ್ಧಿ ಮತ್ತು ರಕ್ಷಣೆಗೆ ಅತ್ಯಗತ್ಯ. ಆದ್ದರಿಂದ, "ಒಂದು ಭೂಮಿ, ಒಂದು ಆರೋಗ್ಯ" ಎಂಬ ದೃಷ್ಟಿಕೋನವನ್ನು ಸಾಕಾರಗೊಳಿಸಲು ಯೋಗವನ್ನು ಅಳವಡಿಸಿಕೊಳ್ಳುವುದು ಇಂದಿನ ಅತಿ ದೊಡ್ಡ ಅಗತ್ಯವಾಗಿದೆ" ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಆಯುಷ್ ಇಲಾಖೆಯಿಂದ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗವು ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಇದು ಆತ್ಮ ಮತ್ತು ದೇಹ, ಆಲೋಚನೆ ಮತ್ತು ಕ್ರಿಯೆ, ಸಂಯಮ ಮತ್ತು ಪರಿಪೂರ್ಣತೆಯ ನಡುವಿನ ಸಮತೋಲನದ ಮಾಧ್ಯಮವಾಗಿದೆ. ಯೋಗವು ನಮ್ಮನ್ನು ಸಂಯಮ, ಸಮತೋಲನ ಮತ್ತು ಪ್ರಕೃತಿಯ ಕಡೆಗೆ ಸಂವೇದನಾಶೀಲರನ್ನಾಗಿ ಮಾಡುತ್ತದೆ. ಇದು ಸಾವಿರಾರು ವರ್ಷಗಳಿಂದ ಮಾನವ ಆರೋಗ್ಯ ಮತ್ತು ಅದರ ಕಲ್ಯಾಣಕ್ಕಾಗಿ ಸಮರ್ಪಿತವಾಗಿರುವ ಭಾರತದ ಸಾಂಸ್ಕøತಿಕ ಸಂಪ್ರದಾಯದ ಸಂಕೇತವಾಗಿದೆ ಎಂದು ತಿಳಿಸಿದರು.
ಯೋಗವು ಎಲ್ಲರನ್ನೂ ಒಗ್ಗೂಡಿಸುವ ಮತ್ತು ಎಲ್ಲರಿಗೂ ಒಳ್ಳೆಯದನ್ನು ಮಾಡುವ ಮೂಲ ಮನೋಭಾವವನ್ನು ಹೊಂದಿದೆ. ಯೋಗವು ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸಲು ಒಂದು ಉತ್ತಮ ಮಾರ್ಗವಾಗಿದೆ. ಇದು ನಮ್ಮ ಋಷಿಮುನಿಗಳು ಮತ್ತು ಸಂತರು ನೀಡಿದ ವಿಶಿಷ್ಟ ಕೊಡುಗೆಯಾಗಿದ್ದು, ಇಂದು ಪ್ರಪಂಚದಾದ್ಯಂತ ಮಾನವೀಯತೆಗೆ ಭರವಸೆಯ ಕಿರಣವಾಗಿದೆ. ಇಡೀ ಜಗತ್ತು ಯೋಗದ ಮಹತ್ವವನ್ನು ಅರ್ಥಮಾಡಿಕೊಂಡಿದೆ ಮತ್ತು ಅದನ್ನು ಅಳವಡಿಸಿಕೊಂಡಿದೆ ಎಂದು ಹೇಳಿದರು.
ಜೂನ್ 21 ರಂದು, ಇಡೀ ಜಗತ್ತು ಅತ್ಯಂತ ದೀರ್ಘವಾದ ದಿನದ ಸೂರ್ಯೋದಯವನ್ನು ಸ್ವಾಗತಿಸುತ್ತಿರುವಾಗ, ನಾವು ಯೋಗದ ಮೂಲಕ ನಮ್ಮೊಳಗಿನ ಸೂರ್ಯನನ್ನು ಜಾಗೃತಗೊಳಿಸುತ್ತೇವೆ ಮತ್ತು ಒತ್ತಡದಿಂದ ಸಮತೋಲನಕ್ಕೆ, ಆತಂಕದಿಂದ ಮನಸ್ಸಿನ ಸ್ಥಿರತೆಗೆ ಮತ್ತು ಅಸಮತೋಲಿತ ಜೀವನದಿಂದ ಪರಿಪೂರ್ಣ ಆರೋಗ್ಯಕ್ಕೆ ನಮ್ಮನ್ನು ಕರೆದೊಯ್ಯುವ ಪ್ರಜ್ಞೆಯನ್ನು ಜಾಗೃತಗೊಳಿಸುತ್ತೇವೆ. 11ನೇ ಅಂತರರಾಷ್ಟ್ರೀಯ ಯೋಗ ದಿನದ ಥೀಮ್ "ಒಂದು ಭೂಮಿಗೆ ಯೋಗ, ಒಂದು ಆರೋಗ್ಯ. "ಒಂದು ಭೂಮಿ, ಒಂದು ಆರೋಗ್ಯ" ಎಂಬ ಕಲ್ಪನೆಯು ಎಲ್ಲಾ ಜೀವಿಗಳು, ಪರಿಸರ ಮತ್ತು ಪ್ರಕೃತಿ ಪರಸ್ಪರ ಸಂಬಂಧ ಹೊಂದಿವೆ ಎಂಬುದನ್ನು ನಮಗೆ ನೆನಪಿಸುತ್ತದೆ. ಈ ಭಾವನೆಯನ್ನು ಅರಿತುಕೊಳ್ಳಲು ಸರಳ ಮತ್ತು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಯೋಗವಾಗಿದೆ ಎಂದು ತಿಳಿಸಿದರು.
ಇಂದು ಜಗತ್ತು ಹವಾಮಾನ ಬದಲಾವಣೆ, ಮಾನಸಿಕ ಒತ್ತಡ, ಜೀವನಶೈಲಿ ರೋಗಗಳು ಮತ್ತು ಪರಿಸರ ಅಸಮತೋಲನದಿಂದ ಬಳಲುತ್ತಿರುವಾಗ, ಯೋಗವು ಒಬ್ಬರ ಆರೋಗ್ಯವನ್ನು ಬಲಪಡಿಸುವುದಲ್ಲದೆ, ಭೂಮಿಯೊಂದಿಗಿನ ನಮ್ಮ ಸಂಪರ್ಕವನ್ನು ಗಾಢವಾಗಿಸುತ್ತದೆ. "ಒಂದು ಆರೋಗ್ಯ" ಎಂದರೆ ಮಾನವರ ಯೋಗಕ್ಷೇಮ ಮಾತ್ರವಲ್ಲದೆ ಎಲ್ಲಾ ಪ್ರಾಣಿ, ಸಸ್ಯ ಮತ್ತು ಪರಿಸರದ ರಕ್ಷಣೆಯೂ ಆಗಿದೆ. ನಾವೆಲ್ಲರೂ ಒಟ್ಟಾಗಿ ಯೋಗವನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ ಮತ್ತು ಆರೋಗ್ಯಕರ, ಶಾಂತಿಯುತ ಮತ್ತು ಸಮತೋಲಿತ ಜಗತ್ತನ್ನು ಸೃಷ್ಟಿಸೋಣ ಎಂದು ರಾಜ್ಯಪಾಲರು ಕರೆ ನೀಡಿದರು.
ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ - ಸಚಿವ ದಿನೇಶ್ ಗುಂಡೂರಾವ್
ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ'ಗಳನ್ನು ಸ್ಥಾಪಿಸಲಾಗುವುದು. ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನು ಪ್ರಾರಂಭಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದೇವೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅμÁ್ಟಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಆಯುಷ್ ಇಲಾಖೆಯಿಂದ ಇಂದು ಯಶಸ್ವಿಯಾಗಿ 11 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ರಾಜ್ಯದ 10 ಸಾವಿರ ಸ್ಥಳಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಯೋಗಭ್ಯಾಸ ಮಾಡಲು ಸರ್ಕಾರ ಅನುವು ಮಾಡಿಕೊಟ್ಟುತ್ತು. 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು.
ರಾಜ್ಯದ ಹಲವೆಡೆ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪಾರ್ಕ್, ಯೋಗ ಧನುಷ್, ಹಸಿರು ಯೋಗ, ಯೋಗ ಮಹಾಕುಂಭ, ಯೋಗ ಸಂಯೋಗ, ಯೋಗ ಅನ್ ಪ್ಲಗ್ಸ್ ನಂತಹ ಕಾರ್ಯಕ್ರಮಗಳನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಹಸಿರು ಯೋಗ ಕಾರ್ಯಕ್ರಮದ ಅಡಿಯಲ್ಲಿ 1 ಲಕ್ಷ ಗಿಡಗಳನ್ನ ನಡಲಾಗುವುದು. ಅಲ್ಲದೇ ಯೋಗ ಧನಷ್ ಎಂಬ ಕಾರ್ಯಕ್ರಮದ ಮೂಲಕ ರಾಜ್ಯದಾದ್ಯಂತ 5 ಲಕ್ಷ ಜನರಿಗೆ ಯೋಗ ಪೆÇ್ರೀಟೋಕಾಲ್ ಅನ್ನು ಹೇಳಿಕೊಡಲಾಗಿದ್ದು, ಕಾರ್ಯಕ್ರಮದ ಅಡಿಯಲ್ಲಿ 5000 ಶಾಲೆಗಳಲ್ಲಿ ಯೋಗ ಪೆÇ್ರೀಟೋಕಾಲ್ ಅನ್ನು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.
‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ವಿಧಾನ ಸೌಧದ ಮೆಟ್ಟಿಲುಗಳ ಎದುರು 5 ಸಾವಿರಕ್ಕೂ ಹೆಚ್ಚು ಜನರು ಯೋಗಾಭ್ಯಾಸ ನಡೆಸಿದರು.
ಸಮಾರಂಭದಲ್ಲಿ ವಿಧಾನ ಪರಿಷತ್‍ನ ಸಭಾಪತಿ ಬಸವರಾಜ್ ಎಸ್ ಹೊರಟ್ಟಿ, ನಟರಾದ ಅನಿರುದ್, ಕಿಶನ್, ನಟಿ ಸಾನಿಯಾ ಅಯ್ಯರ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.