ಹಿರಿಯ ಪತ್ರಿಕೋದ್ಯಮಿ ಕೆಬಿ ಗಣಪತಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Jul 13, 2025 - 11:44
Jul 13, 2025 - 12:35
 0
ಹಿರಿಯ ಪತ್ರಿಕೋದ್ಯಮಿ ಕೆಬಿ ಗಣಪತಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ಬೆಂಗಳೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. 

ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು.

ಕೆಯುಡಬ್ಲ್ಯೂಜೆ ಸಂತಾಪ:
ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.