ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ ಅವರ ತಂದೆ ನಿಧನ-ಗಣ್ಯರ ಸಂತಾಪ

Jun 26, 2025 - 08:28
 0
ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ ಅವರ ತಂದೆ ನಿಧನ-ಗಣ್ಯರ ಸಂತಾಪ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ದೇವರಹಿಪ್ಪರಗಿ: ತಾಲೂಕು 

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪಿ.ಬಿರಾದಾರ ಅವರ ತಂದೆಯವರಾದ ಪರಮಗೌಡ ಬಿರಾದಾರ(81) ಇವರು ದಿ.25.06.2025ರಂದು ನಿಧನರಾಗಿದ್ದಾರೆ. ಮೃತರಿಗೆ ಮಗ,3ಜನ ಹೆಣ್ಣು ಮಕ್ಕಳು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಮುಳಸಾವಳಗಿ ಅವರ ತೋಟದಲ್ಲಿ ಬುಧವಾರದಂದು ನಡೆಯಿತು.

ಗಣ್ಯರ ಸಂತಾಪ: ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ(ಸಾಸನೂರ), ಶರಣಪ್ಪ ಸುಣಗಾರ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ), ಆನಂದಗೌಡ ದೊಡ್ಡಮನಿ, ಕೆಪಿಸಿಸಿ ಸದಸ್ಯರಾದ ಬಿ.ಎಸ್.ಪಾಟೀಲ(ಯಾಳಗಿ), ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ಜಿಲ್ಲಾ ಹಾಗೂ ತಾಲೂಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಮಠಾಧೀಶರು, ರಾಜಕೀಯ ಮುಖಂಡರು, ಸಾಹಿತಿಗಳು, ಶಿಕ್ಷಕರು ಹಾಗೂ ಕಲಾವಿದರು ಸಂತಾಪ ಸೂಚಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.