ಸಮಸ್ಯೆ ಬಗೆಹರಿಸುವಂತೆ ಸಚಿವ ಎಂ ಬಿ ಪಾಟೀಲಗೆ ರೈತಸಂಘ ಮನವಿ

Jun 28, 2025 - 05:52
 0
ಸಮಸ್ಯೆ ಬಗೆಹರಿಸುವಂತೆ ಸಚಿವ ಎಂ ಬಿ ಪಾಟೀಲಗೆ ರೈತಸಂಘ ಮನವಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ವಿಜಯಪುರ: ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಸರಕಾರಿ ಪ್ರೌಡಶಾಲೆ ಪ್ರಾರಂಭಿಸುವುದರ ಜೊತೆಗೆ ಮೂಲಭೂತ ಸೌಕರ್ಯ ಒದಗಿಸುವುದು ಮತ್ತು ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ,ಬಿ ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.


ಹೊನವಾಡ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ೭ ನೇ ತರಗತಿ ಕಲಿತ ಮಕ್ಕಳಿಗೆ ಮುಂದೆ ಕೂಡಾ ಓದಬೇಕಾದರೆ ಸರಕಾರಿ ಪ್ರೌಡಶಾಲೆ ಬೇಕೆ ಬೇಕು ಎಂದು ತಮ್ಮ ಗಮನಕ್ಕೂ ಈ ವಿಷಯವನ್ನು ತಂದಾಗ ಈ ವರ್ಷ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಿರಿ ಆದರೆ ಅದು ಸಾಧ್ಯವಾಗಿಲ್ಲ, ಕೂಡಲೇ ಅಲ್ಲಿಯೇ ಇರುವ ಶಾಲಾ ಕಟ್ಟಡದಲ್ಲಿ ಪ್ರೌಡಶಾಲೆ ಪ್ರಾರಂಭಿಸಬೇಕು ಜೊತೆಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಸಿಬ್ಬಂದಿ ಹಾಗೂ ಕಲಿಕಾ ಸಾಮಗ್ರಗಳನ್ನು ಪೂರೈಸಬೇಕು ಎಂದರು.


ಜೊತೆಗೆ ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ತುಂಬಾ ಇದೆ ಕೂಡಲೇ ಅಲ್ಲಿಯೂ ಅವಶ್ಯಕತೆಗೆ ಅನುಗುಣವಾಗಿ ಸಿಬ್ಬಂದಿ ಕಳಿಸಬೇಕು ಈ ಮೂಲಕ ಬಡವರಿಗೆ, ರೈತರಿಗೆ ಅನುಕೂಲವಾಗುವುದು ಎಂದು ಹೊನವಾಡ ಗ್ರಾಮದ ಸಮಸ್ತ ಸಾರ್ವಜನಿಕರ ಪರವಾಗಿ ಮನವಿ ಸಲ್ಲಿಸಲಾಯಿತು.
ಈ ವೇಳೆ ಮನವಿ ಸ್ವೀಕರಿಸಿದ ಸಚಿವರು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೆ ಅಧಿಕಾರಿಗಳನ್ನು ನಿಯೋಜಿಸುವಂತೆ ತಿಳಿಸಿದರು, ಹಾಗೂ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಕರೆ ಮಾಡಿ ಅದನ್ನು ಬಗೆಹರೆಸುವಂತೆ ತಿಳಿಸಿದರು.


ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ರೈತ ಮುಖಂಡರಾದ ಶಾನೂರ ನಂದರಗಿ, ನಜೀರ ನಂದರಗಿ, ಹಣಮಂತ ಬ್ಯಾಡಗಿ, ಧರೆಪ್ಪ ಸೋರಡಿ, ಸುಧಾಕರ ನಲವಡೆ, ಕಾದರ ವಾಲಿಕರ, ರಿಯಾಜ ವಾಲಿಕರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.