ಜಸ್ಟ್ ಮ್ಯಾರೀಡ್  ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್     

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಜಸ್ಟ್ ಮ್ಯಾರೀಡ್" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ‌. ಕನ್ನಡ ಚಿತ್ರರಂಗದ ಸಾಕಷ್ಟು ಅನುಭವಿ ಹಾಗೂ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಪೈಕಿ ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಡೈನಾಮಿಕ್ ಸ್ಟಾರ್ ದೇವರಾಜ್ ಅವರು ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. 

Jun 20, 2025 - 11:16
 0
ಜಸ್ಟ್ ಮ್ಯಾರೀಡ್  ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್     
ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡ 

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಜಸ್ಟ್ ಮ್ಯಾರೀಡ್" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ‌. ಕನ್ನಡ ಚಿತ್ರರಂಗದ ಸಾಕಷ್ಟು ಅನುಭವಿ ಹಾಗೂ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಪೈಕಿ ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಡೈನಾಮಿಕ್ ಸ್ಟಾರ್ ದೇವರಾಜ್ ಅವರು ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. 

 ದೇವರಾಜ್ ಅವರು ನಿವೃತ್ತ ನ್ಯಾಯಾಧೀಶರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪೂರ್ಣಚಂದ್ರ ಇವರ ಪಾತ್ರದ ಹೆಸರು. 

"ಕರ್ತವ್ಯದಲ್ಲಿ ನ್ಯಾಯಾಧೀಶ, ಸ್ವಭಾವದಲ್ಲಿ ರಕ್ಷಕ ನ್ಯಾಯಾಲಯದಲ್ಲಾದರೂ ಮನೆಯಲ್ಲಾದರೂ ಕಾನೂನು ಸದಾ ಪಾಲನೆ ಆಗುತ್ತದೆ. ನ್ಯಾಯವು ಕೇವಲ ಉದ್ಯೋಗವಲ್ಲ, ಅದು ಬದುಕಿನ ಶೈಲಿ". ಎಂಬ ವಾಕ್ಯಗಳೊಂದಿಗೆ ದೇವರಾಜ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. 

"ಜಸ್ಟ್ ಮ್ಯಾರೀಡ್" ಪ್ರೇಮಕಥೆಯ ಚಿತ್ರವಾಗಿದ್ದರೂ, ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ.  ಸಿ.ಆರ್ ಬಾಬಿ ಅವರೆ ಕಥೆ ಬರೆದಿದ್ದಾರೆ‌. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು. 

 ಅಜನೀಶ್ ಲೀಕನಾಥ್, ಸಂಗೀತ ನಿರ್ದೇಶನ. ಪಿ ಜಿ  ಛಾಯಾಗ್ರಹಣ. ಶ್ರೀಕಾಂತ್ ಮತ್ತು ಪ್ರತೀಕ್,  ಸಂಕಲನ. ಅಮರ್, ಕಲಾ ನಿರ್ದೇಶನ. ವಿಕ್ರಮ್ ಮೋರ್, ಸಾಹಸ ನಿರ್ದೇಶನ. ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ "ಜಸ್ಟ್ ಮ್ಯಾರಿಡ್" ಚಿತ್ರದ ಹಾಡುಗಳನ್ನು ಕೆ. ಕಲ್ಯಾಣ್, ಡಾ. ವಿ ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ನಾಗರ್ಜುನ ಶರ್ಮ ಮತ್ತು ಧನಂಜಯ್ ರಂಜನ್ ಬರೆದಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.