ಬಹು ನಿರೀಕ್ಷಿತ ಜಸ್ಟ್ ಮ್ಯಾರೀಡ್ ಚಿತ್ರದ ಶಿಶುಪಾಲ ಪಾತ್ರದಲ್ಲಿ ದಕ್ಷಿಣ ಭಾರತದ ಹೆಸರಾಂತ ನಟ ಶ್ರೀಮನ್

Jun 23, 2025 - 22:17
 0
ಬಹು ನಿರೀಕ್ಷಿತ ಜಸ್ಟ್ ಮ್ಯಾರೀಡ್ ಚಿತ್ರದ ಶಿಶುಪಾಲ ಪಾತ್ರದಲ್ಲಿ ದಕ್ಷಿಣ ಭಾರತದ ಹೆಸರಾಂತ ನಟ ಶ್ರೀಮನ್

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಭಾರತದ ಜನಪ್ರಿಯ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಿಸಿರುವ, ಸಿ.ಆರ್.ಬಾಬಿ ಅವರೆ ಮೊದಲ ಬಾರಿಗೆ ನಿರ್ದೇಶಿಸಿರುವ ಹಾಗೂ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಜಸ್ಟ್ ಮ್ಯಾರೀಡ್" ಚಿತ್ರದಲ್ಲಿ ಕನ್ನಡ ಹಾಗೂ ಭಾರತೀಯ ಚಿತ್ರರಂಗದ ಹೆಸರಾಂತ ಕಲಾವಿದರು ಅಭಿನಯಿಸಿದ್ದಾರೆ. 

ತೆಲುಗು, ತಮಿಳು ಭಾಷೆಗಳ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿ ಜನಮನಸೂರೆಗೊಂಡಿರುವ ದಕ್ಷಿಣ ಭಾರತದ ಜನಪ್ರಿಯ ನಟ ಶ್ರೀಮನ್ ಅವರು ಸಹ "ಜಸ್ಟ್ ಮ್ಯಾರೀಡ್" ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. "ಶಿಶುಪಾಲ" ಪಾತ್ರದಲ್ಲಿ ಶ್ರೀಮನ್ ಅವರು ಅಭಿನಯಿಸಿದ್ದು, ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಪಾತ್ರದ ಕುರಿತು ಸಹ ಚಿತ್ರತಂಡ ಮಾಹಿತಿ ನೀಡಿತ್ತು. ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ಅನುಭವಿ ಕಲಾವಿದರು ಸಂಗಮದಲ್ಲಿ ಮೂಡಿಬಂದಿರುವ "ಜಸ್ಟ್ ಮ್ಯಾರೀಡ್" ಚಿತ್ರವನ್ನು ಆದಷ್ಟು ಬೇಗ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.