ಕಲ್ಯಾಣ ಕರ್ನಾಟಕ-371 (ಜೆ) ಅನುಷ್ಠಾನಕ್ಕಾಗಿ ಉಪಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Sub-committee formed for implementation of Kalyana Karnataka-371(J): Chief Minister Siddaramaiah

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಬೆಂಗಳೂರು: ರಾಜ್ಯದಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ-371 (ಜೆ) ಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ಮುಂಬಡ್ತಿಗಳಲ್ಲಿನ ಗೊಂದಲಗಳನ್ನು ಪರಿಹರಿಸಲು ಸಚಿವರ ಅಧ್ಯಕ್ಷತೆಯಲ್ಲಿ ಉಪಸಮಿತಿಯನ್ನು ರಚಿಸಲಾಗಿದ್ದು, ಯಾವುದೇ ಸಮಸ್ಯೆಗಳಿದ್ದಲ್ಲಿ ಉಪಸಮಿತಿಯ ಗಮನಕ್ಕೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಈ ಕುರಿತಂತೆ ಇಂದು ವಿಧಾನಪರಿಷತ್‍ನ ಕಲಾಪದ ವೇಳೆ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಅವರು ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು 317 (ಜೆ) ನಡಿ ನೇಮಕಾತಿಗೆ ಸಂಬಂಧಿಸಿದಂತೆ ಕಾಲ-ಕಾಲಕ್ಕೆ ಹೊರಡಿಸಲಾಗಿರುವ ಸುತ್ತೋಲೆಗಳಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳನ್ನು ಪರಿಹರಿಸಿ 3 ಜೂನ್ 2025 ರಂದು ಹೊಸ ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಿದರು.
ಸ್ಥಳೀಯ ವೃಂದ ಹಾಗೂ ಮಿಕ್ಕುಳಿದ ವೃಂದಕ್ಕೆ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸುವುದು ಸೇರಿದಂತೆ ನೇಮಕಾತಿಗೆ ಸಂಬಂಧಿಸಿದಂತೆ ಸ್ಪಷ್ಟವಾಗಿ ಇತ್ತೀಚಿನ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದ್ದು, ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ತಪ್ಪುಗಳಾದಲ್ಲಿ ನೇಮಕಾತಿ ಪ್ರಾಧಿಕಾರವೇ ನೇರಹೊಣೆ ಎಂದು ತಿಳಿಸಲಾಗಿದೆ ಎಂದರು.