ಜನಪ್ರಿಯ ಗಾಯಕಿ ಕೆ.ಎಸ್ ಚಿತ್ರ ಕಂಠಸಿರಿಯಲ್ಲಿ "1990s" ಸಿನಿಮಾದ ಹಾಡು : ಸದ್ಯದಲ್ಲೇ ಪ್ರೇಮಕಥೆ ತೆರೆಗೆ

ನಂದಕುಮಾರ್ CM ನಿರ್ದೇಶನದ, ಅರುಣ್-ರಾಣಿ ವರದ್ ಜೋಡಿಯಾಗಿ ನಟಿಸಿರುವ "1990s" ಚಿತ್ರಕ್ಕಾಗಿ ಮೋಹಿನಿ ಹಾಗೂ ಮಂಜು ಅವರು ಬರೆದಿರುವ "ಮಳೆ ಹನಿಯೆ" ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಹಾಡನ್ನು ಹಿರಿಯ ಕಲಾ ನಿರ್ದೇಶಕ ಕನಕರಾಜ್ ಅನಾವರಣ ಮಾಡಿದರು. ಭಾರತದ ಜನಪ್ರಿಯ ಗಾಯಕಿ ಕೆ.ಎಸ್ ಚಿತ್ರ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಸುಮಧುರ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಹಾರಾಜ ಅವರು ಈ ಮನಮೋಹಕ ಹಾಡಿಗೆ ಸಂಗೀತ ನೀಡಿದ್ದಾರೆ.
ನಿರ್ದೇಶಕ ಸಿ.ಎಂ ನಂದಕುಮಾರ್ ಮಾತನಾಡಿ, "1990"s ಚಿತ್ರ ಮೊದಲೆ ಹೇಳಿದಂತೆ 90 ರ ಕಾಲಘಟ್ಟದ ಪ್ರೇಮ ಕಥಾನಕ. ಈ ಚಿತ್ರದಲ್ಲಿ ಮಹಾರಾಜ ಅವರು ಸಂಗೀತ ನೀಡಿರುವ ಎಲ್ಲಾ ಹಾಡುಗಳು ಅದ್ಭುತವಾಗಿದೆ. ಇಂದು ಬಿಡುಗಡೆಯಾಗಿರುವ " ಮಳೆ ಹನಿಯೆ" ಹಾಡನ್ನು ಚಿತ್ರ ಅವರ ಧ್ವನಿಯಲ್ಲಿ ಕೇಳುವುದೆ ಸೊಗಸು ಎಂದರು.
ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ "ಮಳೆ ಹನಿಯೇ" ಹಾಡು, ಗಾಯಕಿ ಚಿತ್ರ ಅವರು ಕೇವಲ ಮೂರು ಗಂಟೆಗಳ ಕಾಲದಲ್ಲಿ ಹಾಡಿ ಮುಗಿಸಿರುವ ಹಾಡು ಎಂದು ಸಂಗೀತ ನಿರ್ದೇಶಕ ಮಹಾರಾಜ ಹೇಳಿದರು.
ನಾಯಕ ಅರುಣ್, ನಾಯಕಿ ರಾಣಿ ವರದ್, ಛಾಯಾಗ್ರಾಹಕ ಹಾಲೇಶ್, ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಹಾಗೂ ವಿತರಕ ರಮೇಶ್ 1990"s ಬಗ್ಗೆ ಮಾತನಾಡಿದರು.