ಚೆನ್ನಮ್ಮ ಪ್ರಶಸ್ತಿ ವಿಜೇತೆ, ಮುಖ್ಯೋಪಾಧ್ಯೆ ಗೀತಾಗೆ ಸನ್ಮಾನ

Aug 17, 2025 - 11:11
Aug 17, 2025 - 11:36
 0
ಚೆನ್ನಮ್ಮ ಪ್ರಶಸ್ತಿ ವಿಜೇತೆ, ಮುಖ್ಯೋಪಾಧ್ಯೆ ಗೀತಾಗೆ ಸನ್ಮಾನ
ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತೆ, ತಾಲೂಕಿನ ಬೊಮ್ಮನಹಳ್ಳಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯೆ ಶ್ರೀಮತಿ ಗೀತಾ ಎಸ್‌‌ ಇವರನ್ನು ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿದರು.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ಅಲಮೇಲ  : ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತೆ, ತಾಲೂಕಿನ ಬೊಮ್ಮನಹಳ್ಳಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯೆ  ಶ್ರೀಮತಿ ಗೀತಾ ಎಸ್‌‌ ಇವರನ್ನು ಸರಕಾರಿ ಪ್ರೌಢಶಾಲೆಯ ಎಸ್ ಡಿ ಎಮ್ ಸಿ ಅದ್ಯಕ್ಷ  ‌ವಿಠೋಬ ಬಿರಾದಾರ ‌ ಮತ್ತು ಸಹ ಶಿಕ್ಷಕರಾದ ಹುಚ್ಚೇಶ ಕಮತರ್, ಎಸ್ ‌ಡಿ‌ ಭಜಂತ್ರಿ ,ಅತಿಥಿ ಶಿಕ್ಷಕರಾದ ಮಲ್ಲಿಕಾರ್ಜುನ ಶಿರಕನಳ್ಳಿ, ಭಾಗೇಶ ಪಾಟೀಲ, ಪ್ರಮೋದ ಹಳ್ಯಾಳ ಹಾಗೂ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.

ಇದೆ ವೇಳೆ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ‌ಪ್ರಥಮ ಸ್ಥಾನ ಗಳಿಸಿದ ಕುಮಾರಿ ‌ಶಿವಾನಿ ಶಿ ದೊಡಮನಿ‌‌ ಹಾಗೂ ದ್ವಿತೀಯ ಸ್ಥಾನ ಪಡೆದ‌ ಕುಮಾರ್ ,ಅಶ್ವಥ್ ಕುಮಾರ ಮ,ಹಂಡಿ ‌ ಹಾಗೂ ದ್ವಿತೀಯ ‌ಪಿ ಯು ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನುಗಳಿಸಿದ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ಕುಮಾರಿ ಭಾಗ್ಯಶ್ರಿ ಜ ಕುಕನೂರ‌‌ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರಾದ ಶ್ರೀಮತಿ ಗೀತಾ ಎಸ್ ಸನ್ಮಾನಿಸಿದರು.

ಬೊಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಮಡಿವಾಳಪ್ಪ ಹಂಡಿ ನೆರವೇರಿಸಿದರು. ಈ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗೀತಾ ಎಸ್ ಪ್ರಾಸ್ತಾವಿಕ ಭಾಷಣ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ದೇಶಾಭಿಮಾನವನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಊರಿನ ಗಣ್ಯರು ಹಾಜರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.