ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಡಿವಾಳ ಮಾಚಿದೇವ ಜಯಂತಿ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಿಗ್ಗೆ ೯.೩೦ಕ್ಕೆ ಘಂಟೆಗೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದವರೆಗೆ ಮೆರವಣಿಗೆ ನೆರವೆರಿಸಲಾಗುವುದು. ನಂತರ ೧೦.೩೦ಕ್ಕೆ ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ನೆರವೆರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಸಭೆಯ ಶಾಸಕ ಬಸನಗೌಡ ಆರ್.ಪಾಟೀಲ (ಯತ್ನಾಳ) ಅವರು ವಹಿಸಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕ ಬಿ.ಎನ್.ಪಾಟೀಲ ಅವರು ಮಡಿವಾಳ ಮಾಚಿದೇವರ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಬೆಂಗಳೂರು ಅಧ್ಯಕ್ಷರಾದ ಅಪ್ಪಾಜಿ ಸಿ.ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ನವದೆಹಲಿಯ ರಾಜ್ಯ ಸಭಾ ಸದಸ್ಯರಾದ ಡಾ. ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟದೊಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಆಶೋಕ ಮನಗೂಳಿ, ರವಿಕುಮಾರ. ಎನ್, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ, ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ ಅಬ್ದುಲರಜಾಕ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಅಬ್ದುಲ್ ಹಮೀದ ಮುಶ್ರೀಫ್, ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಅಧಿಕಾರಿಗಳು ಭಾಗವಹಿಸಲಿದ್ದಾರೆ.