ಖಾಕಿ ವಶಕ್ಕೆ ಮಹೇಶ್ ಶೆಟ್ಟಿ ತಿಮರೋಡಿ

Aug 21, 2025 - 11:08
Aug 21, 2025 - 11:10
 0
ಖಾಕಿ ವಶಕ್ಕೆ ಮಹೇಶ್ ಶೆಟ್ಟಿ ತಿಮರೋಡಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಅವರು ಫೇಸ್‌ಬುಕ್‌ನಲ್ಲಿ ಹಂಚಿದ ವಿಡಿಯೋದಲ್ಲಿ ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರೆಂಬ ದೂರಿನ ಮೇರೆಗೆ ರಾಜೀವ್ ಕುಲಾಲ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧನ ವೇಳೆ ಹೈಡ್ರಾಮಾ:

ತಿಮರೋಡಿ ಅವರನ್ನು ವಶಕ್ಕೆ ಪಡೆಯಲು 30ಕ್ಕೂ ಹೆಚ್ಚು ಪೊಲೀಸರ ತಂಡ 8 ವಾಹನಗಳಲ್ಲಿ ಉಜಿರಿಯಲ್ಲಿರುವ ಅವರ ಮನೆಗೆ ತೆರಳಿತ್ತು. ಬಂಧನದ ವೇಳೆ ತಿಮರೋಡಿ ಬೆಂಬಲಿಗರು ಮನೆಯ ಮುಂಭಾಗ ಜಮಾಯಿಸಿ, ವಿಚಾರಣೆ ಇಲ್ಲೇ ನಡೆಸಬೇಕು ಎಂದು ಪಟ್ಟು ಹಿಡಿದರು. ಗಿರೀಶ್ ಮಟ್ಟಣ್ಣನವರ್ ಸಹ ಸ್ಥಳದಲ್ಲೇ ಹಾಜರಾಗಿ ಕಾರಣ ವಿಚಾರಿಸಿದರು.

ಸುಮಾರು 30 ನಿಮಿಷಗಳ ಮಾತುಕತೆ ನಂತರ, ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.