ಮಲ್ಲೇಶ್ವರಂ ಕೊ-ಆಪ್ ಬ್ಯಾಂಕ್ ಅಧ್ಯಕ್ಷರಾಗಿ ಎನ್.ಎಂ.ಸುರೇಶ್ ಆಯ್ಕೆ

Feb 2, 2025 - 14:31
Feb 2, 2025 - 14:58
 0
ಮಲ್ಲೇಶ್ವರಂ ಕೊ-ಆಪ್ ಬ್ಯಾಂಕ್ ಅಧ್ಯಕ್ಷರಾಗಿ ಎನ್.ಎಂ.ಸುರೇಶ್ ಆಯ್ಕೆ

ಬೆಂಗಳೂರು : 104 ವರ್ಷಗಳ ಬೃಹತ್ ಇತಿಹಾಸವುಳ್ಳ ಮಲ್ಲೇಶ್ವರಂ ಕೋ ಆಪರೇಟಿವ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಚಲನಚಿತ್ರ ನಿರ್ಮಾಪಕರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಎನ್.ಎಂ. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ  ಉಪಾಧ್ಯಕ್ಷರಾಗಿ ವೈ.ಎಸ್.ಕೇಶವರಾಜು ಆಯ್ಜೆಯಾಗಿದ್ದಾರೆ.  ಈ ಹಿಂದೆ  2005-07ರ ಅವಧಿಗೆ ಬ್ಯಾಂಕ್  ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎನ್.ಎಂ.ಸುರೇಶ್ ಅವರು ಈಗ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
     ಕಳೆದ 28 ವರ್ಷಗಳಿಂದ ಬ್ಯಾಂಕಿನ ನಿರ್ದೇಶಕರಾಗಿ, ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತ ಬಂದಿರುವ ನಾನು, ನಿಕಟಪೂರ್ವ ಅಧ್ಯಕ್ಷರಾದ ಡಿ.ರಮೇಶ್ ಅವರ ಆಶೀರ್ವಾದದಿಂದ  ಹಾಗೂ ನಿರ್ದೇಶಕರೆಲ್ಲರ ಸಹಕಾರದಿಂದ ಅಲ್ಲದೆ  ಈ ಹಿಂದೆ ಬ್ಯಾಂಕಿನ ಅಭಿವೃದ್ದಿಗಾಗಿ ಹಾಕಿದ ಎಫರ್ಟ್ ನಿಂದಾಗಿ‌ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ‌. ಈ ಮೂಲಕ ನನಗೆ ಮತ್ತೊಮ್ಮೆ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ದೊರಕಿದ್ದು, ನ‌ನಗೆ ವಹಿಸಿದ  ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಹಾಗೂ ಈ ಮೂಲಕ ನನ್ನ ಆಯ್ಕೆಗೆ ಸಹಕರಿಸಿದ ಎಲ್ಲ ನಿರ್ದೇಶಕರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಧ್ಯಕ್ಷ ಎನ್.ಎಂ.ಸುರೇಶ್ ತಿಳಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.