ಶ್ರೀ ರಾಘವೇಂದ್ರ ಚಿತ್ರವಾಣಿ ಕನ್ನಡ ಚಿತ್ರರಂಗದ ಸೌಭಾಗ್ಯ : ಕೆ ವಿ ಪ್ರಭಾಕರ

Jan 27, 2025 - 23:28
 0
ಶ್ರೀ ರಾಘವೇಂದ್ರ ಚಿತ್ರವಾಣಿ ಕನ್ನಡ ಚಿತ್ರರಂಗದ ಸೌಭಾಗ್ಯ : ಕೆ ವಿ ಪ್ರಭಾಕರ

ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು  ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ  49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ 

ಪ್ರತಿಷ್ಠಿತ ಪ್ರಚಾರ ಸಂಸ್ಥೆಗೆ ಮುಂದಿನ ವರ್ಷ ಸುವರ್ಣ ಮಹೋತ್ಸವ                            

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಬೆಂಗಳೂರು : ‘ಸೊಸೆ ತಂದ ಸೌಭಾಗ್ಯ’ ಸಿನಿಮಾದಿಂದ ಪಿಆರ್‌ಓ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಹೇಳಿದರು.
                     
ರವಿವಾರ ನಗರದ MMB legacy  ಯಲ್ಲಿ ಅದ್ದೂರಿಯಾಗಿ ಜರುಗಿದ  ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ  ೪೯ನೇ ವಾರ್ಷಿಕೋತ್ಸವ ಹಾಗೂ ೨೪ನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.                

ಕನ್ನಡ ಚಿತ್ರರಂಗದ ಪ್ರಥಮ ಸಿನಿಮಾ ಪ್ರಚಾರಕರ್ತ ದಿವಂಗತ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ ೨೫ ವರ್ಷ ತುಂಬಿದ  ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ೧೦ಕ್ಕೇರಿದೆ. ಮುಂದಿನ ವರ್ಷ ದಿ.ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆ ಆರಂಭವಾಗಿ ೫೦ವರ್ಷಗಳಾಗಲಿದೆ ಎಂದರು.            

ಸಿನಿಮಾ PROಗಳನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ನಿರ್ದೇಶಕರನ್ನಾಗಿಸಲು ಮತ್ತು ಸರ್ಕಾರದ ಸಿನಿಮಾ ಪ್ರಶಸ್ತಿಗೆ ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು. ಮುಂದಿನ ವರ್ಷ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ ೫೦ನೇ ವರ್ಷ ಆಚರಿಸುತ್ತಿದೆ. ಈ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಿ. ನಿಮ್ಮ ಜೊತೆಗೆ ನಾವು ಇರತ್ತೇವೆ ಎಂದು ತಿಳಿಸಿದರು.    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ ನರಸಿಂಹಲು, ಕನ್ನಡ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ಪತ್ರಕರ್ತೆ ವಿಜಯಮ್ಮ, ಇಂದ್ರಜಿತ್ ಲಂಕೇಶ್, ಪತ್ರಕರ್ತ ಸದಾಶಿವ ಶೆಣೈ, ನಟಿ ರಾಗಿಣಿ ದ್ವಿವೇದಿ ಹಾಗೂ ರಾಜಕೀಯ ಮುಖಂಡರಾದ ಸಂಜಯ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.             

ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿAಹಲು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ವಿಜಯಮ್ಮ, ಸಂಜಯ್ ಗೌಡ, ಚಿತ್ರ ನಟಿ ರಾಗಿಣಿ ದ್ವಿವೇದಿ ಹಾಗೂ ನಿರ್ದೇಶಕ ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ತಮ್ಮ ಪ್ರೋತ್ಸಾಹಭರಿತ ಹಾಗೂ ಪ್ರೀತಿತುಂಬಿದ ಮಾತುಗಳ ಮೂಲಕ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಕಾರ್ಯಗಳನ್ನು ಮುಕ್ತಕಂಠದಿAದ ಶ್ಲಾಘಿಸಿದರು.        

ಪ್ರಶಸ್ತಿ ವಿಜೇತರು ತಮ್ಮ ಸಂತೋಷವನ್ನು ಮಾತುಗಳ ಮೂಲಕ ಹಂಚಿಕೊAಡರು. ಪ್ರಶಸ್ತಿ ಪ್ರಾಯೋಜಕರು, ಚಲನಚಿತ್ರ ಹಾಗೂ ಮಾಧ್ಯಮದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ರಾಘವೇಂದ್ರ ಚಿತ್ರವಾಣಿಯ ಸುಧೀಂದ್ರ ವೆಂಕಟೇಶ್ ತಮ್ಮ ಮಾತುಗಳ ಮೂಲಕ ಸಮಾರಂಭಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ಆತ್ಮೀಯವಾಗಿ ಸ್ವಾಗತಿಸಿದರು.

೨೦೨೪ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ : 

೨೦೨೪ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಹಿರಿಯ ಚಲನಚಿತ್ರ ನಿರ್ಮಾಪಕರಾದ ಶ್ರೀಮತಿ ಮೀನಾಕ್ಷಿ ಕೆ.ವಿ. ಜಯರಾಂ ಅವರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ, ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ಅವರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ, ಕುಮಾರಿ ಅನುರಾಧಾ ಭಟ್ (ಗಾಯಕಿ) ಅತ್ತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿAದ, ಹಿರಿಯ ನಿರ್ದೇಶಕ  ಓಂಪ್ರಕಾಶ ರಾವ್ ಅವರಿಗೆ ಯಜಮಾನ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ ಅವರಿಂದ, ಹಿರಿಯ ನಟಿ  ರೇಖಾರಾವ್ ಅವರಿಗೆ ನಟಿ ಡಾ.ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆAಟ್ ಪ್ರೈ ಲಿ ಪ್ರಶಸ್ತಿ (ಅತ್ಯುತ್ತಮ ಸಂಗೀತ ನಿರ್ದೇಶನ, ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕಾಗಿ, ಶಿವಮ್ಮ ಚಿತ್ರದ ಉತ್ತಮ ಕಥಾಲೇಖನಕ್ಕಾಗಿ ಜೈಶಂಕರ್ ಆರ್ಯರ್ ಅವರಿಗೆ ಖ್ಯಾತ ನಿರ್ದೇಶಕ-ನಿರ್ಮಾಪಕ ಕೆ.ವಿ. ಜಯರಾಂ ಪ್ರಶಸ್ತಿ, ಮೀನಾಕ್ಷಿ ಜಯರಾಂ ಅವರಿಂದ, "ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರದ ಸಂಭಾಷಣೆಗಾಗಿ ಚಂದ್ರಜಿತ್ ಬೆಳ್ಳಿಯಪ್ಪ ಅವರಿಗೆ ಖ್ಯಾತ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ, ಡಾ.ಎಸ್.ಕೆ. ನರಹರಿ ಅವರಿಂದ, "ಫೋಟೊ" ಚಿತ್ರದ ಚೊಚ್ಚಲ ನಿರ್ದೇಶನಕ್ಕಾಗಿ  ಉತ್ಸವ ಗೋನ್ವಾರ್ ಅವರಿಗೆ ಬಿ. ಸುರೇಶ ಅವರು ನೀಡುವ ಪ್ರಶಸ್ತಿ, "ಕೃಷ್ಣಂ ಪ್ರಣಯ ಸಖಿ" ಚಿತ್ರದ "ದ್ವಾಪರ" ಹಾಡಿನ ಗೀತರಚನೆಗಾಗಿ  ಡಾ.ವಿ.ನಾಗೇಂದ್ರ ಪ್ರಸಾದ್ ಅವರಿಗೆ ಹಿರಿಯ ಪತ್ರಕರ್ತರಾದ .ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಪತ್ರಕರ್ತ ವಿನಾಯಕರಾಮ್ ಅವರು ನೀಡುವ ಪ್ರಶಸ್ತಿ ನೀಡಿ ಗೌರವಿಸಲಾಯಿತು.    ಈ ಬಾರಿ ಸಮರ್ಜಿತ್ ಲಂಕೇಶ್ ಅವರು "ಗೌರಿ" ಚಿತ್ರದ ಅಭಿನಯಕ್ಕಾಗಿ  ಶ್ರೀರಾಘವೇಂದ್ರ ಚಿತ್ರವಾಣಿಯ ವಿಶೇಷ ಪ್ರಶಸ್ತಿಗೆ ಭಾಜನರಾದರು.     

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.