"ರುದ್ರ ಗರುಡ ಪುರಾಣ" ಚಿತ್ರದ ಮತ್ತೊಂದು ಮನಮೋಹಕ ಹಾಡು ಬಿಡುಗಡೆ

Jan 11, 2025 - 21:33
 0
"ರುದ್ರ ಗರುಡ ಪುರಾಣ" ಚಿತ್ರದ ಮತ್ತೊಂದು ಮನಮೋಹಕ ಹಾಡು ಬಿಡುಗಡೆ

 ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ರಿಷಿ ಅಭಿನಯದ ಈ ಚಿತ್ರ ಜನವರಿ 24 ರಂದು ತೆರೆಗೆ

2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ, ಟೀಸರ್ ಮೂಲಕ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ "ಅದೇನೇನೋ ಖುಷಿ ತಂದೆ, ಅದೇನೇನೋ ನಶೇ ತಂದೆ" ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ.  ಕೃಷ್ಣಪ್ರಸಾದ್ ಸಂಗೀತ ನೀಡಿರುವ ಈ ಹಾಡನ್ನು ತಮ್ಮ ಅಮೋಘ ಗಾಯನದ ಮೂಲಕ ಹೆಸರಾಗಿರುವ ಸಂಜಿತ್ ಹೆಗ್ಡೆ ಹಾಗೂ ದೀಪಿಕಾ ವರದರಾಜನ್ ಹಾಡಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟೀಸರ್ ಮೂಲಕ ಮೆಚ್ಚುಗೆ ಪಡೆದುಕೊಂಡಿರುವ  ಈ ಚಿತ್ರ ಜನವರಿ 24ರಂದು ತೆರೆಕಾಣಲಿದೆ. 

ಮಿಸ್ಟ್ರಿ ಥ್ರಿಲ್ಲರ್ ಕಥಾಹಂದರ ಹೊಂದಿರುವ "ರುದ್ರ ಗರುಡ ಪುರಾಣ"ದಲ್ಲಿ ಪ್ರೇಮ ಕಥೆಯೂ ಇದೆ. 

ಹೆಸರಾಂತ ನಿರ್ದೇಶಕ ಜೇಕಬ್ ವರ್ಗೀಸ್ ಅವರ ಬಳಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ  ನಂದೀಶ್ ನಿರ್ದೇಶನದ ಎರಡನೇ ಚಿತ್ರ `ರುದ್ರ ಗರುಡ ಪುರಾಣ. 

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ವಿಜಯ್ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. 

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ನಟಿಸಿದ್ದಾರೆ. ವಿನೋದ್ ಆಳ್ವಾ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರೀಶ್ ಶಿವಣ್ಣ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ.  ಸಂದೀಪ್ ಕುಮಾರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕೃಷ್ಣ ಪ್ರಸಾದ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.