ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸಹಕಾರಿ : ವಿಠ್ಠಲ ಕೊಳ್ಳುರ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಸಿಂದಗಿ: ಮಕ್ಕಳ ತಮ್ಮ ಆಸಕ್ತಿದಾಯಕವಾದ ನೃತ್ಯ, ಸಂಗೀತ, ಆಶು ಭಾಷಣ, ಏಕಪಾತ್ರಾಭಿನಯದಲ್ಲಿ ಮಕ್ಕಳು ಭಾಗವಹಿಸುವ ಸೂಕ್ತ ವೇದಿಕೆ ಇದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೊಳೂರ ಹೇಳಿದರು.
ಸಿಂದಗಿ ಪಟ್ಟಣದ ಹೊರವಲಯದ ಭೀಮಾ ಯುನಿವರ್ಸಲ್ ಸೆಂಟ್ರಲ್ ಶಾಲೆಯಲ್ಲಿ ಹಮ್ಮಿಕೊಂಡ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಗುವಿನ ಪ್ರತಿಭೆಯನ್ನು ಹೊರಹಾಕಲು ಶಾಲೆಯಲ್ಲಿ ಮಕ್ಕಳಿಗೆ ಭೌದ್ಧಿಕ, ಮಾನಸಿಕ, ತಾಳ್ಮೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಲು ನಾವು ಪ್ರತಿ ವರ್ಷ ಪ್ರತಿಭಾ ಕಾರಂಜಿಯನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಬೇಕು ಎಂದರು.
ಈ ವೇಳೆ ಪ್ರಾಚಾರ್ಯೆ ಶಾಹಿನ್ ಶೇಖ ಮಾತನಾಡಿ, ಇಂತಹ ವೇದಿಕೆಗಳಿಂದ ಮಕ್ಕಳಲ್ಲಿ ಸೃಜನಶೀಲತೆಯ ಗುಣ ಬೆಳೆಯುತ್ತದೆೆ ಎಂದರು.
ಕಾರ್ಯಕ್ರಮದಲ್ಲಿ ನಿರ್ದೇಶಕ ಭೀಮಾಶಂಕರ ತಾರಾಪೂರ, ಭೀಮಾಶಂಕರ ಮಾವೂರ, ಶಾಂತು ಕುಂಬಾರ, ಚನ್ನು ಪಡಶೆಟ್ಟಿ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.