ಜು.೮ರಂದು ’ಬಿಚ್ಚುಗತ್ತಿ’ ಗ್ರಂಥ ಲೋಕಾರ್ಪಣೆ :ಗೋಲಾ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ, ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜು, ಮಾತೋಶ್ರೀ ಗುರುಬಸಮ್ಮ ಹ.ಸೋಮಾಪೂರ ಸೇವಾ ಸಂಸ್ಥೆ ಹಾಗೂ ಲಾಯನ್ಸ್ ಕ್ಲಬ್ ಸಹಯೋಗದಲ್ಲಿ ಶಿಕ್ಷಣ ಮಹಾವಿದ್ಯಾಲಯದ ಸಭಾಭವನದಲ್ಲಿ ಜು.೦೮ರಂದು ಬೆಳಿಗ್ಗೆ ೯:೩೦ ಗಂಟೆಗೆ ಎಂಜೆಫ್ ಲಾಯನ್ ಕೆ.ಎಚ್.ಸೋಮಾಪೂರ ಅವರ ಬಿಚ್ಚುಗತ್ತಿ ಗ್ರಂಥ ಲೋಕಾರ್ಪಣೆ ಹಾಗೂ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.
ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಸಮ್ಮುಖವನ್ನು ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಅಧ್ಯಕ್ಷತೆಯನ್ನು ಪಿಇಎಸ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ.ಪಿ.ಕರ್ಜಗಿ ವಹಿಸುವರು. ಗ್ರಂಥ ಲೋಕಾರ್ಪಣೆಯನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಸಿ.ಎಂ.ತ್ಯಾಗರಾಜ ನೆರವೇರಿಸುವರು. ಗ್ರಂಥಾವಲೋಕನವನ್ನು ನಿವೃತ್ತ ಪ್ರಾಧ್ಯಾಪಕ ಧಾರವಾಡ ಸಾಹಿತಿ ಡಾ.ಸಂಗಮನಾಥ ಲೋಕಾಪೂರ ಮಾಡಲಿದ್ದಾರೆ.
ಅತಿಥಿಗಳಾಗಿ ತಾಳಿಕೋಟಿಯ ಶಿವಯೋಗಿ ಸಂಗಮಾರ್ಗ ವಿದ್ಯಾಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ, ಜಿ.ಪಿ.ಪೋರವಾಲ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ಡಾ.ರವಿ ಗೋಲಾ, ತಾಳಿಕೋಟಿಯ ಎಸ್.ಕೆ.ಪದವಿ ಕಾಲೇಜಿನ ಪ್ರಾಚಾರ್ಯ ದಯಾನಂದ ಮೂಗಡ್ಲಿಮಠ ಇರಲಿದ್ದಾರೆ. ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಜೆ.ಸಿ.ನಂದಿಕೋಲ, ಆರ್.ಡಿ.ಪಾಟೀಲ ಪಪೂ ಕಾಲೇಜು ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಸಿ.ಎಂ.ತ್ಯಾಗರಾಜ ಅವರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು ಎಂದು ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಲೇಖಕ ಕೆ.ಎಚ್.ಸೋಮಾಪೂರ, ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ, ಜೆ.ಸಿ.ನಂದಿಕೋಲ, ಡಾ.ಶರಣಬಸವ ಜೋಗುರ ಸೇರಿದಂತೆ ಅನೇಕರಿದ್ದರು.