ಭಾಸ್ಕರಾಚಾರ್ಯರ ವಿಧಾನದಿಂದ ಗಣಿತ ಸಮಸ್ಯೆಗಳಿಗೆ ಪರಿಹಾರ : ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ

Jul 6, 2025 - 04:24
 0
ಭಾಸ್ಕರಾಚಾರ್ಯರ ವಿಧಾನದಿಂದ ಗಣಿತ ಸಮಸ್ಯೆಗಳಿಗೆ ಪರಿಹಾರ : ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ವಿಜಯಪುರ: ಭಾಸ್ಕರಾಚಾರ್ಯರ ವಿಧಾನದ ಮೂಲಕ ಗಣಿತದ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದಾಗಿದೆ ಎಂದು ಮಹಿಳಾ ವಿವಿಯ ನೂತನ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.


ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗ ಹಾಗೂ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಅಡಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ “ಗ್ರಂಥಗಳ- ಲೋಕಾರ್ಪಣೆ” ಸಮಾರಂಭದಲ್ಲಿ ಅವರು ಮಾತನಾಡಿದರು.


ಸಾಮಾನ್ಯ ಪ್ರಕಟಿತ ಪಠ್ಯಪುಸ್ತಕಗಳ ಕಠಿಣ ಶೈಲಿಯಿಂದ ಹೊರಬಂದು, ವಿದ್ಯಾರ್ಥಿಗಳನ್ನು ಅರ್ಥಗರ್ಭಿತ, ಜ್ಯಾಮಿತೀಯ ಹಾಗೂ ಕಾವ್ಯಾತ್ಮಕ ರೀತಿಯಲ್ಲಿ ಚಿಂತಿಸಲು ಪ್ರೋತ್ಸಾಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಕಲನಶಾಸ್ತ್ರ, ಬೀಜಗಣಿತ ಮತ್ತು ಸಂಖ್ಯಾ ಸಿದ್ಧಾಂತದ ಪರಿಕಲ್ಪನೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಹಿಂದೈ ಗಣಿತ ಐತಿಹಾಸಿಕ-ಒಂದು ಮೂಲ ಗ್ರಂಥ ಭಾಗ- II , ಭಾರತದಲ್ಲಿ ಶ್ರೇಣಿ ಗಣಿತ, ಭಾರತೀಯ ಗಣಿತ ಶಾಸ್ತçದ ಚಾರಿತ್ರೆ ಭಾಗ-೧, ಬ್ರಹ್ಮಗುಪ್ತಮ್-೧ ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಗ್ರಂಥಗಳ ಲೇಖಕ ಹಾಗೂ ನಿವೃತ್ತ ಚಾರ್ಟರ್ಡ ಅಭಿಯಂತರ ಡಾ.ವೇಣುಗೋಪಾಲ ಹೆರೂರ, ಹಾಗೂ ಗುಲಬರ್ಗಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಎನ್.ಬಿ ನಡುವಿನಮನಿ, ವಿವಿಯ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿಜ್ಞಾನ ನಿಕಾಯದ ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.


ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯೋಜಕ ಪ್ರೊ.ಜಿ.ಜಿ.ರಜಪೂತ ಸ್ವಾಗತಿಸಿ, ಭಾಸ್ಕಾರಾಚಾರ್ಯರರ ಕೊಡುಗೆಗಳು ಹಾಗೂ ಗ್ರಂಥಗಳ ಬಗ್ಗೆ ಮಾಹಿತಿ ನೀಡಿದರು. ಪ್ರಸಾರಾಂಗ ನಿರ್ದೇಶಕಿ ಪ್ರೊ.ರಾಜು ಬಾಗಲಕೋಟ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿಯರಾದ ಸಹನಾ ದೇಶಪಾಂಡೆ ಹಾಗೂ ಸೌಂದರ್ಯ ನಿರೂಪಿಸಿದರು. ಆಸಿಯಾ ದೌಲತಕೋಟಿ ವಂದಿಸಿದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.