ವೈಜ್ಞಾನಿಕ ಮನೋಭಾವದ ಕೊರತೆಯಿಂದ ಸಮಾಜದಲ್ಲಿ ಮೌಢ್ಯಗಳು ಹೆಚ್ಚಾಗಿವೆ : ಪ್ರೊ.ಶಾಂತಾದೇವಿ ಟಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ: ಜನರಲ್ಲಿ ವೈಜ್ಞಾನಿಕ ಮನೋಭಾವದ ಕೊರತೆಯಿಂದಾಗಿ ಸಮಾಜದಲ್ಲಿ ಇನ್ನೂ ಮೌಢ್ಯಗಳು ಹೆಚ್ಚಾಗಿವೆ. ವಿಜ್ಞಾನವನ್ನು ಜನಪ್ರಿಯಗೊಳಿಸುವುದರಿಂದ ಸಮಾಜದಲ್ಲಿನ ಮೌಡ್ಯತೆ ಹಾಗೂ ಅಂಧಕಾರಗಳನ್ನು ಕಡಿಮೆ ಮಾಡಬಹುದಾಗಿದೆ ಎಂದು ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಶಾಂತಾದೇವಿ ಟಿ ಅಭಿಪ್ರಾಯಪಟ್ಟರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ತಂತ್ರಜ್ಙಾನ ಮತ್ತು ಜೈವಿಕ ತಂತ್ರಜ್ಞಾನ ವಿಭಾಗಗಳು ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ವಿಯಪುರ ಚಾಪ್ಟರ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಪ್ರಾದೇಶಿಕ ಭಾಷೆಯಲ್ಲಿ ವಿಜ್ಞಾನ ಸಂವಹನ” ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಧೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಜನಪ್ರಿಯಗೊಳಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದರು.
ಯಾವ ದೇಶ ವಿಜ್ಞಾನವನ್ನು ಚನ್ನಾಗಿ ಅರಿತಿದೆ, ಆ ದೇಶವು ಸಮೃದ್ದವಾಗಿದೆ. ವಿಜ್ಞಾನವನ್ನು ಹೆಚ್ಚು ಜನಪ್ರಿಯಗೊಳಿಸಲು ಇಂತಹ ಹಲವಾರು ಕಾರ್ಯಾಗಾರಗಳು ಅವಶ್ಯವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವೈದ್ಯಕೀಯ ಮತ್ತು ಎಂಜನಿಯರಿಂಗ್ ಶಿಕ್ಷಣ ಕನ್ನಡ ಮಾಧ್ಯಮದಲ್ಲಿ ದೊರೆಯುವಂತಾಗಬೇಕು ಎಂದರು. ಇದೇ ಸಂದರ್ಭದಲ್ಲಿ ವಿಜ್ಞಾನ ಕ್ಷೇತ್ರದ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಿದರು.
ವಿಜ್ಞಾನ ಸಂವಹನದಲ್ಲಿ ಸಾಕಷ್ಟು ಅವಕಾಶಗಳಿದ್ದು ಅದಕ್ಕೆ ಬೇಕಾದ ಕೌಶಲಗಳನ್ನು ಕಲಿತುಕೊಳ್ಳುವ ಮೂಲಕ ವೃತ್ತಿ ಜೀವನ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ಸಲಹೆ ಮಾಡಿದ ಅವರು, ಮಹಿಳಾ ವಿವಿಯಲ್ಲಿ ವಿಜ್ಞಾನದ ಪರಿಸರ ರೂಪಿಸುವಲ್ಲಿ ಹಿಂದಿನ ಕುಲಪತಿ ಪ್ರೊ.ಗೀತಾ ಬಾಲಿ ಅವರ ಪರಿಶ್ರಮ ಅಪಾರವಾಗಿದ್ದು ಅವರ ಮುಖಂಡತ್ವದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ವಿಜಯಪುರ ಚಾಪ್ಟರ್ ಕಾರ್ಯ ಮಾಡುತ್ತಿದೆ.
-ಪ್ರೊ.ಓಂಕಾರ ಕಾಕಡೆ
ಮುಖ್ಯಸ್ಥರು
ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಸಂಪನ್ಮೂಲ ವ್ಯಕ್ತಿಯಾಗಿದ್ದ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿಯ) ಜಂಟಿ ಕುಲಸಚಿವ ವೀರಣ್ಣ ಕಮ್ಮಾರ ಮಾತನಾಡಿ ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಬರುವ ವಿಜ್ಞಾನಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಬೇಕು, ವಿಜ್ಞಾನವನ್ನು ರೂಡಿ ಭಾಷೆಯಲ್ಲಿ ಮಾತನಾಡಬೇಕು, ಇದರಿಂದ ವಿಜ್ಞಾನ ಜನಪ್ರಿಯಗೂಳ್ಳುತ್ತದೆ ಎಂದರು.
ಇನ್ನೊಬ್ಬ ಸಂಪನ್ಮೂಲ ವ್ಯಕ್ತಿ ಗುಬ್ಬಿ ಲ್ಯಾಬ್‌ನ ನಿರ್ದೇಶಕ ಡಾ.ಸುಧೀರ ಎಚ್.ಎಸ್. ಅವರು ವಿಜ್ಞಾನದಲಿ ್ಲಕನ್ನಡ ಬಳಕೆ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತಾರವಾಗಿ ತಿಳಿಸಿದರು. ಕನ್ನಡದಲ್ಲಿ ವಿಜ್ಞಾನ ಲೇಖನಗಳನ್ನು ಪ್ರಕಟಿಸುವುದರ ಬಗ್ಗೆ, ಇನ್ಪಗ್ರಾಫಿಕ್ಸ ವಿಷಯದ ಮೇಲೆ ವಿಸ್ತಾರವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮದ ಆಯೋಜಕರಾದ ಡಾ.ಬಾಬು. ಆರ್.ಎಲ್ ಪ್ರಾಸ್ತಾವಿಕ ಮಾತನಾಡಿದರು. ಡಾ.ಜಾಯ್ ಹೊಸಕೇರಿ ವಂದಿಸಿದರು, ಬೋಧಕ, ಮತ್ತು ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.