ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ : ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಮಾಹಿತಿ

Jul 7, 2025 - 21:11
 0
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ : ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಮಾಹಿತಿ
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಬೆಂಗಳೂರು :  ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ  ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.                    

ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ೨೦೨೨-೨೩ ಹಾಗೂ ೨೦೨೩-೨೪ ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದಿದ್ದಾರೆ.        

ಒಟ್ಟು ೨೪ ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ: ಮಹಿಳಾ ಆಯವ್ಯಯದಡಿ ೧೦ ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ ೧೦ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ೪ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು.                 ಇಂಟರ್ನ್ಷಿಪ್ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ ೨೦,೦೦೦/- ರೂ. ಸ್ಟೈಪೆಂಡ್ ನೀಡಲಾಗುವುದು.  ಅಭ್ಯರ್ಥಿಗಳು ತಮ್ಮ ಸ್ವವಿವರ (ಅuಡಿಡಿiಛಿuಟum ಗಿiಣಚಿe) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ hಣಣಠಿs://ಜಿoಡಿms.gಟe/Ugಓqಆಛಿಈs೧v೬ಚಿಞಥಿಂಆ೯ ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.             ಅರ್ಜಿ ಸಲ್ಲಿಸಲು ೨೦೨೫ ರ ಜುಲೈ ೨೫ ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.