ಕ್ಯಾಲೆಂಡರ್ ಬಿಡುಗಡೆ ಮಾಡಿದ ಶಿವರಾಜಕುಮಾರ್

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷರು ಇತ್ತೀಚೆಗೆ ಶಿವರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇದೇ ಸಮಯದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕ್ಯಾಲೆಂಡರ್ ಅನ್ನು ಶಿವರಾಜಕುಮಾರ್ ಅವರು ಬಿಡುಗಡೆ ಮಾಡಿದರು.