ಮನೆಗಳ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರ ಪರಿವೀಕ್ಷಣೆ

Jun 18, 2025 - 22:51
 0
ಮನೆಗಳ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರ ಪರಿವೀಕ್ಷಣೆ
ವಿಜಯಪುರ ನಗರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪಲೈನ್ ಸ್ಥಳಾಂತರಿಸುವ ಕಾಮಗಾರಿ, ಅರಕೇರಿ ಜಾಕವೆಲ್‌ದಿಂದ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ವಿಜಯಪುರ : ವಿಜಯಪುರ ನಗರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪಲೈನ್ ಸ್ಥಳಾಂತರಿಸುವ ಕಾಮಗಾರಿ, ಅರಕೇರಿ ಜಾಕವೆಲ್‌ದಿಂದ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
.                     
ಬುಧವಾರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಪರಿವೀಕ್ಷಣೆ ನಡೆಸಿದ ಅವರು, ಪೌರಕಾರ್ಮಿಕರ ಗೃಹಭಾಗ್ಯ (ಪಿ.ಕೆ.ಜಿ.ಬಿ)ಯೋಜನೆಯಡಿ ವಿಜಯಪುರ ನಗರದ ಹಂಚನಾಳ ಪಿ.ಎಚ್ ಗ್ರಾಮಕ್ಕೆ ಭೇಟಿ ನೀಡಿ,  ಈಗಾಗಲೇ ನಿರ್ಮಾಣಗೊಂಡಿರುವ ಹಾಗೂ ಹಂಚಿಕೆ ಮಾಡಲಾದ ಜಿ+೨ ಮಾದರಿಯ ೫೬ ಗುಂಪು ಮನೆಗಳಲ್ಲಿ  ವಾಸವಾಗಿರುವ ಫಲಾನುಭವಿಗಳ ಸಮಸ್ಯೆಯನ್ನು ಆಲಿಸಿದ ಅವರು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಗೆ ಕ್ರಮ ವಹಿಸುವಂತೆ ತಿಳಿಸಿದ ಅವರು, ನಿರ್ಮಾಣ ಹಂತದಲ್ಲಿರುವ ೬೦ ಗುಂಪು ಮನೆಗಳ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಉಳಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ  ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.         

ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದಲ್ಲಿ  ಪಿಎಂಎವಾಯ್ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಜಿ+೧ ಮಾದರಿಯ ೧೪೯೩ ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು,  ಹಕ್ಕು ಪತ್ರ ಪಡೆದುಕೊಂಡು ವಾಸ ಮಾಡುತ್ತಿರುವ ಫಲಾನುಭವಿಗಳ ಮನೆಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.            

ರಾಷ್ಡಿçÃಯ ಹೆದ್ದಾರಿಗೆ ಕೂಡುವ ನಗರದ ರಿಂಗ್ ರಸ್ತೆ ಶ್ರೀ ನೇತಾಜಿ ಸುಭಾಷಚಂದ್ರ ಭೋಸ ವೃತ್ತದಿಂದ ಸೊಲಾಪೂರ ರಾಷ್ಟಿçÃಯ ಹೆದ್ದಾರಿ ವರೆಗೆ ವಿದ್ಯುತ್ ಕಂಬಗಳ ಸ್ಥಳಾಂತರ, ಯು.ಜಿ.ಡಿ ಲೈನ್ ಸ್ಥಳಾಂತರ ಹಾಗೂ  ಕುಡಿಯುವ ನೀರಿನ ಪೈಪಲೈನ್‌ಗಳನ್ನು ಸ್ಥಳಾಂತರಿಸಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಯುದ್ದೋಪಾದಿಯಲ್ಲಿ ಕೈಗೊಂಡು ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.                 

ವಿಜಯಪುರ ನಗರದ ವಿವಿಧ ವಾರ್ಡಗಳಿಗೆ ಕುಡಿಯುವ ನೀರಿನ ಜಲಮೂಲವಾಗಿರುವ ಭೂತನಾಳ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ  ಮುಖ್ಯ ಪಾತ್ರವಹಿಸುವ ಅರಕೇರಿ  ಜಾಕ್‌ವೇಲ್‌ಗೆ ಭೇಟಿ ನೀಡಿದ ಅವರು, ಕುಡಿಯುವ ನೀರು ಸರಬರಾಜು ಪ್ರಕ್ರೀಯೆಯಲ್ಲಿ ಯಾವುದೇ ತೊಂದರೆ ಉಂಟಾಗದAತೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ  ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.                 

ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.