ಶ್ರೀಮದ್ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ

ಹೊರ್ತಿ: ಸಮೀಪದ ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಸುಸಲಾದಿ ಗ್ರಾಮದಲ್ಲಿ ನೂತನಾವಾಗಿ ನಿರ್ಮಿಸಿದ ನೂತನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಉದ್ಘಾಟನೆ ಹಾಗೂ ಲಿಂಗ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮಕ್ಕೆ ಗುರುವಾರ ಸಂಜೆ ಸುಸಲಾದಿ ಗ್ರಾಮಕ್ಕಾಗಮಿಸಿದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭ ಹೊತ್ತ ಮಹಿಳೆಯರು ಹಾಗೂ ವಿವಿಧ ಕಲಾ ವಾದ್ಯ ಮತ್ತು ಸಕಲ ಭಕ್ತರ ಸಮ್ಮುಖದಲ್ಲಿ ಬಾಳೆಹೊನ್ನೂರು ಶ್ರೀ ಮದ್ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವವು ಅದ್ದೂರಿಯಿಂದ ಜರುಗಿತು.