ಸಿದ್ದರಾಮಯ್ಯರ ಉಪಕಾರ ಯಾವತ್ತು ಮರೆಯುವುದಿಲ್ಲ : ಸಿಎಂಗೆ ಧನ್ಯವಾದ ತಿಳಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಘಟ್ಟದಲ್ಲಿ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ, ಶೈಕ್ಷಣಿಕ ಪ್ರಗತಿಗೆ ಶರವೇಗ ದೊರಕಿದ್ದು, ಅವರ ಉಪಕಾರವನ್ನು ನಾವು ಯಾವತ್ತೂ ಮರೆಯುವುದಿಲ್ಲ, ಸೂರ್ಯ ಚಂದ್ರ ಇರುವವರೆಗೂ ಇಂಡಿ ಕ್ಷೇತ್ರದ ಜನರ ಮನಸ್ಸಲ್ಲಿ ನಿಮ್ಮ ಹೆಸರು ಶಾಶ್ವತವಾಗಿರಲಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ವಿ ಪಾಟೀಲ ಧನ್ಯವಾದ ತಿಳಿಸಿದರು.
ಸೋಮವಾರ ಶ್ರೀ ಸಿದ್ದೇಶ್ವರ ಮೆಗಾ ಮಾರುಕಟ್ಟೆ ಉದ್ಘಾಟನೆ, ಇಂಡಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ-ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಲಿಂಬೆ ಅಭಿವೃದ್ದಿ ಮಂಡಳಿ ಲಾಂಛನ ಬಿಡುಗಡೆ ಕಾರ್ಯಕ್ರಮಲ್ಲಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.
ಇಂಡಿ ನಾಡಿನಲ್ಲಿರುವ ನೀರಾವರಿ ಕ್ರಾಂತಿಯನ್ನು ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳಿಗೆ ಹಾಗೂ ಶೈಕ್ಷಣಿಕವಾದ ಪ್ರಗತಿಯನ್ನು ಬಂಥನಾಳ ಶಿವಯೋಗಿಗಳಿಗೆ ಅರ್ಪಣೆ ಮಾಡಲಾಗಿದೆ ಎಂದು ಹೇಳಿದ ಅವರು, ೨೮ ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಹೊರ್ತಿ ರೇವಣಸಿದ್ದೇಶ್ವರ ಯೋಜನೆಗೆ ಸರ್ಕಾರ ೨೬೩೮ ಕೋಟಿ ರೂ. ಬೃಹತ್ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ, ೧೯ ಕೆರೆಗಳನ್ನು ತುಂಬುವುದು ಸೇರಿದಂತೆ ನೀರಾವರಿಗಾಗಿಯೇ ಇಂಡಿ ಮತಕ್ಷೇತ್ರಕ್ಕೆ ೩೮೦೦ ಕೋಟಿ ರೂ. ಅನುದಾನ. ಭೀಮಾಶಂಕರ ಸಕ್ಕರೆ ಕಾರ್ಖಾನೆ ಪುನರುಜ್ಜೀವನಕ್ಕೆ ಅನುದಾನ, ಲಿಂಬೆ ಬೆಳೆಗೆ ಉತ್ತೇಜನ ಸೇರಿದಂತೆ ೪೦ ವರ್ಷಗಳಿಂದ ಆಗದೇ ಇರುವ ಕೆಲಸಗಳನ್ನು ಈ ಸರ್ಕಾರ ಮಾಡಿದೆ. ಈ ಭಾಗದ ಅಭಿವೃದ್ದಿಗಾಗಿ ಹಲವು ಯೋಜನೆಗಳನ್ನು ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮಾದರಿಯಲ್ಲಿ ಈ ಭಾಗದ ಸರ್ವತೋಮುಖ ಪ್ರಗತಿಗಾಗಿ ವಿಶೇಷÀ ಮಂಡಳಿ ರಚನೆ ಮಾಡುವಂತೆ ಅವರು ಮನವಿ ಮಾಡಿಕೊಂಡರು.
ಸೋಮವಾರ ಶಕ್ತಿ ಯೋಜನೆಯಡಿ ೫೦೦ ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪ ದರ್ಶನಾಪೂರ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ಹಂಪನಗೌಡ ಬಾದರ್ಲಿ, ಶಾಸಕರುಗಳಾದ ಸುನೀಲಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ಅಶೋಕ ಎಮ್ ಮನಗೂಳಿ, ಎಂ ವೈ ಪಾಟೀಲ, ಮಾಜಿ ಶಾಕರಾದ ಶರಣಪ್ಪ ಸುಣಗಾರ, ರಾಜು ಆಲಗೂರ, ಧಾರಾವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಇಂಡಿ ಪುರಸಭೆಯ ಅಧ್ಯಕ್ಷರಾದ ಅಂಬಾಜಿ ರಾಠೋಡ, ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ, ಜಿಲ್ಲಾಧಿಕಾರಿ ಡಾ.ಆನಂದ ಕೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ಬಿ ನಿಂಬರಗಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.