ಲೋಕ್ ಅದಾಲತ್‌ದಲ್ಲಿ ಒಟ್ಟು ೧,೭೬,೩೨೪ ಪ್ರಕರಣಗಳು ಇತ್ಯರ್ಥ

Jul 15, 2025 - 01:40
 0
ಲೋಕ್ ಅದಾಲತ್‌ದಲ್ಲಿ ಒಟ್ಟು ೧,೭೬,೩೨೪ ಪ್ರಕರಣಗಳು ಇತ್ಯರ್ಥ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ಕಲಬುರಗಿ : ಗೌರವಾನ್ವಿತ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ (ದಿನಾಂಕ:೧೨-೦೭-೨೦೨೫ರAದು) ಶನಿವಾರ ಕಲಬುರಗಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಒಟ್ಟು ೧,೭೬,೩೨೪ ಪ್ರಕರಣಗಳು ಇತ್ಯರ್ಥವಾಗಿದ್ದು, ಅವುಗಳಲ್ಲಿ ೧೫,೮೭೭ ಪೆಂಡಿAಗ್ ಪ್ರಕರಣಗಳು ಹಾಗೂ ೧,೬೦,೪೪೭ ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿರುತ್ತವೆ ಎಂದು ಕಲಬುರಗಿ  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ್ ನವಲೆ ಅವರು ತಿಳಿಸಿದ್ದಾರೆ. 

ಅದೇ ರೀತಿ ಜಿಲ್ಲೆಯಲ್ಲಿ ೦೯ ಪ್ರಕರಣಗಳಲ್ಲಿ ಬೇರ್ಪಡೆಯಾಗಿದ್ದ ಪತಿ ಮತ್ತು ಪತ್ನಿಯರನ್ನು ಒಂದುಗೂಡಿಸಲಾಯಿತು. ೧೦ ವರ್ಷಗಳಿಗಿಂತ ಹೆಚ್ಚಿನ ಅವಧಿಯ ೦೧ ಪ್ರಕರಣ, ೦೫ ವರ್ಷಗಳಿಗಿಂತ ಹೆಚ್ಚಿನ ಅವಧಿಯ ೦೫ ಪ್ರಕರಣಗಳನ್ನು ರಾಜಿ ಮಾಡಿಸಿದ್ದು, ಈ ಮೂಲಕ ಕಲಬುರಗಿ ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಅದ್ಭುತ ಯಶಸ್ಸನ್ನು ಕಂಡಿರುತ್ತದೆ.  

ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಎಲ್. ಲಕ್ಷ್ಮೀನಾರಾಯಣ ಸೇರಿದಂತೆ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ನ್ಯಾಯವಾದಿಗಳು, ಸಾರ್ವಜನಿಕರು ಹಾಗೂ ಕಕ್ಷಿದಾರರ ಸಹಕಾರದಿಂದ  ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಸಿವಿಲ್ ದಾವೆಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು ಹಾಗೂ ಬ್ಯಾಂಕ್‌ಗಳಿಗೆ ಸಂಬAಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಶನಿವಾರ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಈ ರಾಷ್ಟಿçÃಯ ಲೋಕ್‌ಅದಾಲತ್ ಹಮ್ಮಿಕೊಳ್ಳಲಾಗಿತ್ತು.

ಈ ಲೋಕ ಅದಾಲತ್‌ನಲ್ಲಿ ಕಕ್ಷಿದಾರರು, ನ್ಯಾಯಾಧೀಶರು, ಸಂಧಾನಕಾರರು ಹಾಗೂ ಸಂಬAಧಪಟ್ಟ ನ್ಯಾಯವಾದಿಗಳು ರಾಜೀ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.