ಪ್ರತಿದಿನ ಯೋಗ ಮಾಡುವುದನ್ನು ಜೀವನ ಶೈಲಿಯಾಗಿ ರೂಢಿಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು : ಶಾಸಕ ಅಲ್ಲಮ್‌ಪ್ರಭು ಪಾಟೀಲ

Jun 22, 2025 - 11:41
 0
ಪ್ರತಿದಿನ ಯೋಗ ಮಾಡುವುದನ್ನು ಜೀವನ ಶೈಲಿಯಾಗಿ ರೂಢಿಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು : ಶಾಸಕ ಅಲ್ಲಮ್‌ಪ್ರಭು ಪಾಟೀಲ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಕಲಬುರಗಿ : ಇಂದಿನ ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳಷ್ಟು ಮುಖ್ಯವಾಗಿದೆ. ಆದ್ದರಿಂದ ಪ್ರತಿದಿನ ಯೋಗ ಮಾಡುವುದನ್ನು ಜೀವನ ಶೈಲಿಯಾಗಿ ರೂಢಿಸಿಕೊಂಡು ತಮ್ಮ ಆರೋಗ್ಯವನ್ನು  ಕಾಪಾಡಿಕೊಳ್ಳಬೇಕು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಮ ಪ್ರಭು ಪಾಟೀಲ ಅವರು ಹೇಳಿದರು.
    ಶನಿವಾರದಂದು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ  ಆಯುಷ್ ಇಲಾಖೆ ಬೆಂಗಳೂರು,  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಮಹಾನಗರ ಪಾಲಿಕೆ ಕಲಬುರಗಿ  ಆಯುಷ್ ಇಲಾಖೆ, ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಅರುಜೀವಾ ಆಯುರ್ವೇದ ಆಸ್ಪತ್ರೆ (ಸಮಗ್ರ ಚಿಕಿತ್ಸೆ) ಮಾನವಿಯ ಕಲ್ಯಾಣ ಟ್ರಸ್ಟ್, ಕಲಬುರಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ" ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ  ೧೧ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯೋಗೋತ್ಸವ  ಕಾರ್ಯಕ್ರಮವನ್ನು ಯೋಗ ಸಂಗಮ್ಮ " ಸಸಿಗೆ ನೀರೆರೆಯುವ ಮೂಲಕ  ಉದ್ಪಾಟಿಸಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಯೋಗವನ್ನು ಮಾಡುವುದನ್ನು ರೂಢಿಸಿಕೊಂಡು ಹೋದರೆ ಬಹಳಷ್ಟು ಆರೋಗ್ಯವಂತ ಜೀವನ ನಡೆಸಲು ಸಾಧ್ಯವಿದೆ. ದಿನನಿತ್ಯ ಯೋಗ ಮಾಡಿ ತಮ್ಮ ಆರೋಗ್ಯವನ್ನು  ಕಾಪಾಡಿಕೊಳ್ಳಬೇಕು ಎಂದರು.


    ಜಿಲ್ಲಾಧಿಕಾರಿ ಬಿ. ಪೌಜಿಯಾ ತರನ್ನುಮ್ ಅವರು ಮಾತನಾಡಿ, ಜೀವನದಲ್ಲಿ ನಾವು ಒತ್ತಡಗಳಿಂದ ಹೊರ ಬರಲು ಪ್ರತಿಯೊಬ್ಬರು ಪ್ರತಿನಿತ್ಯ ಯೋಗ ಮಾಡುವುದನ್ನು ರೂಡಿಸಿಕೊಳ್ಳಬೇಕು. ಯೋಗವನ್ನು ಮಾಡುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯವಿದೆ ಎಂದರು.
    ಯೋಗವನ್ನು ಮಾಡುವುದರಿಂದ ಶಿಸ್ತುಬದ್ಧ ಆರೋಗ್ಯವಂತ ಜೀವನವನ್ನು ನಡೆಸಲು ಸಾಧ್ಯವಿದೆ.  ಆಯುಷ್ ಇಲಾಖೆಯಿಂದ ೧೧ ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
    ಸುದೀಪ್, ನಾಗರಾಜ, ಶ್ರೀಮತಿ ಶಶಿಕಲ್ ಹಾಗೂ ಡಾ. ಭವಾನಿ ಯೋಗ ಪ್ರಾತ್ಯಕ್ಷತೆ ನಡೆಸಿಕೊಟ್ಟರು. ಪ್ರಭಾರ ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ.ಕೆ.ಬಿ. ಬಬಲಾದಿ ಪ್ರಸ್ತಾವಿಕವಾಗಿ ಮಾತನಾಡಿದರು.
    ಇದೇ ಸಂದರ್ಭದಲ್ಲಿ  ಆಯುಷ್ ಇಲಾಖೆಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ಶಿಬಿರವನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಮಪ್ರಭು ಪಾಟೀಲ ಅವರು ಉದ್ಫಾಟಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್, ನಗರ ಪೋಲಿಸ್ ಆಯುಕ್ತ ಡಾ.ಎಸ್.ಡಿ. ಶರಣಪ್ಪ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರದಲ್ಲಿ ೧೫೦ ಜನರಿಗೆ ಉಚಿತ ಚಿಕಿತ್ಸೆ  ನೀಡಲಾಯಿತು.
    ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಾನವೀಯ ಕಲ್ಯಾಣ ಟ್ರಸ್ಟ್ ಅಧ್ಯಕ್ಷರಾದ  ಎಲ್.ಎಸ್.ಪಾಟೀಲ, ಮತ್ತು ಶರಣು ಪುಪ್ಪು, ಚೇರಮನ್ ಚೆಂಬರ್ ಆಫ್ ಕಾಮರ್ಸ ಸಮಾಜ ಸೇವಕ  ಉಮೇಶ ಶೆಟ್ಟಿ,  ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ,  ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಪ್ಪ ಕ್ಯಾತನಾಳ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೀತಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಅಕ್ಕಣ್ಣ,  ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರ್ಯಕಾಂತ ಮದಾನೆ, ಯುವ ಜನಸೇವಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಕಲಬುರಗಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಜಿಲ್ಲೆಯ ವಿವಿಧ ಯೋಗ ಸಂಘ -ಸಂಸ್ಥೆಗಳ ಸದಸ್ಯರು, ಯೋಗ ಶಿಬಿರಾರ್ಥಿಗಳು, ಆಯುಷ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ೧೫೭೫ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.