ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್ : ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

Jun 20, 2025 - 11:56
 0
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್ : ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ ಪ್ರೊಡಕ್ಷನ್ಸ್‌ ಸ್ಥಾಪಿಸಿ, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ ನಿರ್ಮಿಸಿದ್ದಾರೆ. ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.


ಆಗಸ್ಟ್ 1ಕ್ಕೆ ಯಶ್ ತಾಯಿ ಪುಷ್ಪ ಅವರು ನಿರ್ಮಿಸಿರುವ ಚೊಚ್ಚಲ ಚಿತ್ರ ಕೊತ್ತಲವಾಡಿ ಥಿಯೇಟರ್ ಗೆ ಎಂಟ್ರಿ ಕೊಡಲಿದೆ. ಯುವ ಪ್ರತಿಭೆ ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದ್ದು, ಪೃಥ್ವಿ ಅಂಬರ್ ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. 

ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಕೊತ್ತಲವಾಡಿ ಟೀಸರ್‌ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ


ಸಿನಿಮಾದ ಹಾಡುಗಳಿಗೆ ವಿಕಾಸ್‌ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ನೀಡಿದ್ದಾ

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.