ತಾ.ಪಂ ಕಚೇರಿ ಆವರಣದಲ್ಲಿ ಸ್ವಚ್ಛ ಶನಿವಾರ ಅಭಿಯಾನ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಮುದ್ದೇಬಿಹಾಳ : ಪಟ್ಟಣದ ತಾಲೂಕು ಪಂಚಾಯತಿ ಆವರಣದಲ್ಲಿ ಸ್ವಚ್ಛ ಶನಿವಾರ ಅಂಗವಾಗಿ ಸ್ವಚ್ಛತ ಶ್ರಮದಾನ ಮಾಡಲಾಯಿತು.
ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಸ್.ಮಸಳಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ, ಪ್ರತಿ ವಾರದ ಶನಿವಾರದಂದು ತಾಲೂಕು ಕಚೇರಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ಶನಿವಾರ ಹಮ್ಮಿಕೊಂಡು ಸ್ವಚ್ಛಗೊಳಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಯಂ ಪ್ರೇರಿತವಾಗಿ ಪಾಲ್ಗೊಂಡು ಕಚೇರಿ ಆವರಣ, ಕೊಠಡಿ, ಶೌಚಾಲಯ ಹಾಗೂ ಇತರೆ ಸ್ಥಳಗಳನ್ನು ಶುಚಿಗೊಳಿಸಲಾಗುತ್ತಿದೆ. ಇದರಿಂದ ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣವಾಗಲು ಸಾಧ್ಯವಾಗಿದೆ ಎಂದು ಹೇಳಿದರು.
ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಯೋಜನಾಧಿಕಾರಿ ಖೂಭಾಸಿಂಗ ಜಾಧವ, ಸಹಾಯಕ ನಿರ್ದೇಶಕ ಪಿ.ಎಸ್.ಕಸನಕ್ಕಿ (ಗ್ರಾ.ಉ.), ಅಕ್ಷರ ದಾಸೋಹ ಸಹಾಯಕ ನಿರ್ದೆಶಕ ಎಂ.ಎA.ಬೆಳಗಲ್,ಆನAದಗೌಡ ಬಿರಾದಾರ ಹಾಗೂ ತಾಲೂಕು ಪಂಚಾಯತ ಅಧಿಕಾರಿ, ಸಿಬ್ಬಂದಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.