ಮುದ್ದೇಬಿಹಾಳದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಮುದ್ದೇಬಿಹಾಳ : ಪಟ್ಟಣದಲ್ಲಿರುವ ನ್ಯಾಯಾಲಯಗಳ ಸಂಕೀರ್ಣದಲ್ಲಿ ಇನ್ನೂ ಎರಡು ನ್ಯಾಯಾಲಯಗಳನ್ನು ಸ್ಥಾಪಿಸುವಷ್ಟು ಸ್ಥಳಾವಕಾಶವಿದ್ದು ಇದಕ್ಕೆ ಮೂಲಭೂತ ಸೌರ‍್ಯ ಒದಗಿಸಿ ಹೆಚ್ಚುವರಿ ಜೆ.ಎಂ.ಎಫ್.ಸಿ ಹಾಗೂ ಸಿವ್ಹಿಲ್ ಹಿರಿಯ ಶ್ರೇಣಿಯ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಕೋರಲಾಗಿದೆ ಎಂದು ಮುದ್ದೇಬಿಹಾಳ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ಭಾನುವಾರ ಆಗಮಿಸಿದ್ದ ಹೈಕೋರ್ಟ ನ್ಯಾಯಮೂರ್ತಿ ಎಂ.ಐ.ಅರುಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ದೂರವಾಣಿಯಲ್ಲಿ ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದರು. ಮುದ್ದೇಬಿಹಾಳ ನ್ಯಾಯಾಲಯದಲ್ಲಿ ಪ್ರಕರಣಗಳ ಒತ್ತಡ ಅಧಿಕವಾಗಿವೆ. ಪಕ್ಕದ ನಿಡಗುಂದಿ ತಾಲ್ಲೂಕಿನ ಪ್ರಕರಣಗಳನ್ನು ಮುದ್ದೇಬಿಹಾಳ ಕೋರ್ಟ್ಗೆ ವರ್ಗಾವಣೆ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿರಿಸಿದ್ದೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ.,ಪ್ರಧಾನ ಹಿರಿಯ ದಿವಾನಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅಂಬಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ವಕೀಲರ ಸಂಘದ ಕಾರ್ಯದರ್ಶಿ ಪಿ.ಬಿ.ಗೌಡರ, ಹಿರಿಯ ಸದಸ್ಯರಾದ ಎಂ.ಎಚ್.ಹಾಲಣ್ಣವರ, ಜೆ.ಎ.ಚಿನಿವಾರ, ಎನ್.ಆರ್.ಮೊಕಾಶಿ,ಎಸ್.ಬಿ.ಬಾಚಿಹಾಳ ಮೊದಲಾದವರು ಇದ್ದರು.