ಮುದ್ದೇಬಿಹಾಳ : ಶಕ್ತಿ ಯೋಜನೆ ೨.೨೪ ಕೋಟಿ ಮಹಿಳೆಯರ ಪ್ರಯಾಣ

Jul 15, 2025 - 01:33
 0
ಮುದ್ದೇಬಿಹಾಳ : ಶಕ್ತಿ ಯೋಜನೆ ೨.೨೪ ಕೋಟಿ ಮಹಿಳೆಯರ ಪ್ರಯಾಣ
ಮುದ್ದೇಬಿಹಾಳ ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಸಾರಿಗೆ ಘಟಕ ವ್ಯವಸ್ಥಾಪಕ ಎ.ಎಚ್.ಮದಭಾವಿ ಅವರನ್ನು ಸನ್ಮಾನಿಸಿದರು.
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಮುದ್ದೇಬಿಹಾಳ : ಸಾರಿಗೆ ಘಟಕದಿಂದ ಶಕ್ತಿ ಯೋಜನೆ ಆರಂಭದಿAದ ಈವರೆಗೂ ೨.೨೪ ಕೋಟಿ ಮಹಿಳೆಯರು ಪ್ರಯಾಣಿಸಿದ್ದು ೮೮.೪೩ ಕೋಟಿ ರೂ.ಆದಾಯ ತಂದು ಕೊಟ್ಟಿದ್ದಾರೆ ಎಂದು ಸಾರಿಗೆ ಘಟಕ ವ್ಯವಸ್ಥಾಪಕ ಎ.ಎಚ್.ಮದಭಾವಿ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ  ಶಕ್ತಿ ಯೋಜನೆಯಡಿ ರಾಜ್ಯದಲ್ಲಿ ೫೦೦ಕೋಟಿ ಮಹಿಳೆಯರು ಪ್ರಯಾಣಿಸಿದ ಹಿನ್ನೆಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸ್‌ನ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ಯಾರಂಟಿ ಅನುಷ್ಠಾನ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಜಿಲ್ಲಾ ಉಪಾಧ್ಯಕ್ಷ ಸದ್ದಾಂ ಕುಂಟೋಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಶೆಳ್ಳಗಿ ಗ್ಯಾರಂಟಿ ಸಮಿತಿಯ ಪದಾಧಿಕಾರಿಗಳು ಇದ್ದರು.ಇದೇ ವೇಳೆ ಘಟಕ ವ್ಯವಸ್ಥಾಪಕ ಎ.ಎಚ್.ಮದಭಾವಿ ಅವರಿಗೆ ಸನ್ಮಾನಿಸಿದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.