ಕಾನಿಪ ಜಿಲ್ಲಾ ಪ್ರಶಸ್ತಿಗೆ ಮಲ್ಲಿಕಾರ್ಜುನ ಅಲ್ಲಾಪುರ ಆಯ್ಕೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಸಿಂದಗಿ : ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ ೨೦೨೫ನೆಯ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಸಿಂದಗಿ ತಾಲೂಕು ವಿಶ್ವವಾಣಿ ಪತ್ರಿಕೆ ವರದಿಗಾರ ಹಾಗೂ ತಾಲೂಕು ಕಾನಿಪ ಉಪಾಧ್ಯಕ್ಷ ಮಲ್ಲಿಕಾರ್ಜುನ ಅಲ್ಲಾಪೂರ ಆಯ್ಕೆಯಾಗಿದ್ದಾರೆ ಎಂದು ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ ಹೇಳಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜು.೧೯ರಂದು ಶನಿವಾರ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ, ಸಚಿವ ಶಿವಾನಂದ ಪಾಟೀಲ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅಶೋಕ ಮನಗೂಳಿ,ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಸೇರಿದಂತೆ ಜಿಲ್ಲೆಯ ಶಾಸಕರು, ಸಂಘದ ರಾಜ್ಯ, ಜಿಲ್ಲೆಯ ಅಧ್ಯಕ್ಷರು, ಹಿರಿಯ ಪತ್ರಕರ್ತರು ಅಧಿಕಾರಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು ೨೩ ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ವಿಶೇಷ ವರದಿಗಳ ಮೂಲಕ ತಾಲೂಕಿನ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಬೆಳಕು ಚೆಲ್ಲಿದ್ದು ಇಲ್ಲಿ ಸ್ಮರಿಸಬಹುದು.