ಜಿಲ್ಲಾ ಉಸ್ತುವಾರಿ ಸಚಿವರ ನಡೆ ತಾಲೂಕಿನಡೆಗೂ ಇರಲಿ : ಶಿವಪ್ಪಗೌಡ

Jul 17, 2025 - 22:59
 0
ಜಿಲ್ಲಾ ಉಸ್ತುವಾರಿ ಸಚಿವರ ನಡೆ ತಾಲೂಕಿನಡೆಗೂ ಇರಲಿ : ಶಿವಪ್ಪಗೌಡ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 


ಸಿಂದಗಿ : ಕರ್ನಾಟಕ ಘನ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರುಗಳು ಕೇವಲ ತಮ್ಮ ಮತಕ್ಷೇತ್ರವನ್ನಷ್ಟೇ ಉಸ್ತುವಾರಿ ಮಾಡುವುದರ ಮೂಲಕ ನಾಮಕಾವಾಸ್ತೆ ಜಿಲ್ಲಾ ಉಸ್ತುವಾರಿ ಸಚಿವರ ಹುದ್ದೆ ಹೊಂದುತ್ತಿರುವುದು ವಿಷಾದನೀಯ ಎಂದು ಹಿರಿಯ ಸಹಕಾರಿ ಧುರೀಣ ಶಿವಪ್ಪಗೌಡ ಬಿರಾದಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.        

ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು ಜಿಲ್ಲಾ ಉಸ್ತುವಾರಿಗಳಾದವರು ತಮ್ಮ ಜಿಲ್ಲೆಯ ಎಲ್ಲ ಮತಕ್ಷೇತ್ರಗಳ ಬಗ್ಗೆ ಗಮನಹರಿಸಿ ಆ ಕ್ಷೇತ್ರಗಳನ್ನು ಅಭಿವೃದ್ದಿ ಪಡಿಸಬೇಕು. ಆದರೆ ವಿಪರ್ಯಾಸÀವೆಂದರೆ ತಮ್ಮ ಮತ ಅಷ್ಟೇ ಕ್ಷೇತ್ರಗಳನ್ನು ಅಭಿವೃದ್ದಿ ಪಡಿಸುತ್ತಿದ್ದಾರೆ. ಹಾಗಾದರೆ ಜಿಲ್ಲಾ ಉಸ್ತುವಾರಿ ಹುದ್ದೆ ಯಾಕೆ ಬೇಕು ಎಂದು ಪ್ರಶ್ನಿಸಿದ ಅವರು  ವರ್ಷದಲ್ಲಿ ಕನಿಷ್ಠ ತ್ರೆöÊಮಾಸಿಕ ಸಭೆಯನ್ನು ತಾಲೂಕಾ ಮಟ್ಟದಲ್ಲಿ ಕರೆದು ಜನರ ಅಹವಾಲುಗಳನ್ನು ಸ್ವೀಕರಿಸುವಂತಾಗಬೇಕು.         

ಇದರಿಂದ  ಶಾಸಕರಿಗೂ ಕಾರ್ಯದ ಭಾರದ ಒತ್ತಡ ಕಡಿಮೆಯಾಗುತ್ತದೆ ಮತ್ತು  ತಾಲೂಕಿನ ಪ್ರಗತಿ ಸಾಧ್ಯವಾಗುತ್ತದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಮ್ಮ ಹುದ್ದೆಯ ಘನತೆಯನ್ನು ಹೆಚ್ಚಿಸಿದಂತಾಗುತ್ತದೆ. ಜನರ ತೆರಿಗೆ ಹಣ ಸದುಪಯೋಗವಾಗುತ್ತದೆ ಎಂದು ಶಿವಪ್ಪಗೌಡ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.