ಎವಿಎಸ್ ಆಯುರ್ವೇದ ಕಾಲೇಜಿನ ಕ್ರೀಡಾಪಟುಗಳ ಸಾಧನೆ

Oct 2, 2024 - 22:16
 0
ಎವಿಎಸ್ ಆಯುರ್ವೇದ ಕಾಲೇಜಿನ ಕ್ರೀಡಾಪಟುಗಳ ಸಾಧನೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ವಿಜಯಪುರ : ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮೂರು ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದಾರೆ.           

ಸೋಮವಾರ ಇಳಕಲ್ಲಿನ ಶ್ರೀ ವಿಜಯ ಮಹಾಂತೇಶ ಆಯುರ್ವೇದ ಮೆಡಿಕಲ್ ಕಾಲೇಜಿನ ಆರ್. ವೀರಮಣಿ ಕ್ರೀಡಾಂಗಣದಲ್ಲಿ ನಡೆದ ಥ್ರೋಬಾಲ್ ಕ್ರೀಡಾಕೂಟದಲ್ಲಿ ವಿಜಯಪುರ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಪುರುಷರ ತಂಡ ಪ್ರಥಮ ಸ್ಥಾನ ಪಡೆಯಿತು.                  

ಇದೇ ವಿಭಾಗದಲ್ಲಿ ಮಹಿಳೆಯರ ತಂಡ ತೃತೀಯ ಸ್ಥಾನ ಪಡೆಯಿತು.  ಅಲ್ಲದೇ, ಟೆನಿಕಾಯ್ಟ್ ಕ್ರೀಡೆಯಲ್ಲಿ ಮಹಿಳೆಯರ ತಂಡ ದ್ವಿತೀಯ ಸ್ಥಾನ ಪಡೆಯಿತು.          

ಕ್ರೀಡಾಪಟುಗಳ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ನಿರ್ದೇಶಕ ಸುನೀಲಗೌಡ ಪಾಟೀಲ, ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮತ್ತು ದೈಹಿಕ ನಿರ್ದೇಶಕ ಹಣಮಂತ ಪವಾರ ಹಾಗೂ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.