ಸಚಿವರ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಪಡಿಸುವೆ : ಡಾ.ಪ್ರಭುಗೌಡ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ತಾಳಿಕೋಟೆ : ಬೂದಿಹಾಳ ಪೀರಾಪೂರ ಏತ ನೀರಾವರಿಗೆ ಸಂಬಂಧಿಸಿದ ಕೊನೆ ಹಂತದ ಎಫ್.ಐ.ಸಿ (ಹೊಲ ಗಾಲುವೆ) ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಶನಿವಾರರಂದು ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತಾಪಿ ಜನರು ತಾಲೂಕಿನ ಕೊಡಗಾನೂರ ಕ್ರಾಸ್‌ನಲ್ಲಿ ಪ್ರಾರಂಬಿಸಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ ಅವರು ಬೆಟ್ಟಿ ನೀಡಿದರು.
ಈ ಸಮಯದಲ್ಲಿ ಮಾತನಾಡಿದ ಡಾ.ಪ್ರಭುಗೌಡ ಅವರು ಬೂದಿಹಾಳ ಪೀರಾಪೂರ ಏತ ನೀರಾವರಿಗೆ ಸಂಬಂಧಿಸಿದ ಕೊನೆ ಹಂತದ ಎಫ್.ಐ.ಸಿ (ಹೊಲ ಗಾಲುವೆ) ಕಾಲುವೆ ನಿರ್ಮಾಣ ಮಾಡಿ ತಾಳಿಕೋಟೆ ತಾಲೂಕಿನ ೩೮ ಹಳ್ಳಿಗಳಿಗೆ ರೈತರ ಜಮೀನುಗಳಿಗೆ ನೀರಿನ ಅನುಕೂಲತೆ ಕಲ್ಪಿಸಬೇಕೆಂದು ರೈತರ ಧರಣಿಗೆ ನನ್ನ ಬೆಂಬಲಿವಿದೆ ಅದರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರ ಜೊತೆಗೆ ಚರ್ಚಿಸಿ ಸೀಘ್ರದಲ್ಲಿಯೇ ಮುಂದುವರೆದ ಕಾಮಗಾರಿಗೆ ಅವಶ್ಯವಿರುವ ಅನುದಾನ ಬಿಡುಗಡೆಗೊಳಿಸಲು ಮತ್ತು ಕಾಮಗಾರಿ ಪ್ರಾರಂಭಕ್ಕೆ ಅನುಮೋದನೆ ಕೊಡಿಸಲು ಪ್ರಯತ್ನಿಸುವದಾಗಿ ತಿಳಿಸಿದರು.
ಈ ಸಮಯದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರದಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರೈತ ಮುಖಂಡರಾದ ಗುರುರಾಜ ಪಡಶೆಟ್ಟಿ, ರಾಯಪ್ಪಗೌಡ ಪಾಟೀಲ, ಸಾಹೇಬಗೌಡ ಯಾಳಗಿ, ಬಸನಗೌಡ ಯಾಳವಾರ, ಬಸನಗೌಡ ಚೌದ್ರಿ, ನಾನಾಗೌಡ ಬಿರಾದಾರ, ಎಚ್.ಎನ್.ಬಿರಾದಾರ, ಸುರೇಶಕುಮಾರ ಇಂಗಳಗೇರಿ, ಡಾ.ಪ್ರಭುಗೌಡ ಬಿರಾದಾರ(ಅಸ್ಕಿ), ಮಹಾದೇವ ಅಸ್ಕಿ, ಪರಶುರಾಮ ತಳವಾರ, ಪರಶುರಾಮ ನಾಲತವಾಡ, ಬಾಬುಗೌಡ ಬಿರಾದಾರ, ಚಿದುಗೌಡ ಬಿರಾದಾರ, ಎಂ.ಎಂ.ಪಾಟೀಲ(ಸಾಲವಾಡಗಿ), ರಾಜುಗೌಡ ಕೊಳೂರ, ಹಣಮಂತ್ರಾಯ ಕೊಣ್ಯಾಳ, ವಿರೇಶ ಹಿರೇಮಠ, ಬಸವರಾಜ ಹೊಸಳ್ಳಿ, ಮೊದಲಾದವರು ಇದ್ದರು.