ಜೀವಾವಧಿ ಶಿಕ್ಷಾಬಂಧಿಗಳ ಅವಧಿಪೂರ್ವ ಬಿಡುಗಡೆ

Jul 28, 2025 - 23:32
 0
ಜೀವಾವಧಿ ಶಿಕ್ಷಾಬಂಧಿಗಳ ಅವಧಿಪೂರ್ವ ಬಿಡುಗಡೆ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ವಿಜಯಪುರ ಕೇಂದ್ರ ಕಾರಾಗೃಹದಲ್ಲಿರುವ ೦೪ ಜನ ಪುರುಷ ಹಾಗೂ ೦೨ ಮಹಿಳಾ ಶಿಕ್ಷಾ ಬಂದಿ ಸೇರಿದಂತೆ ಒಟ್ಟು ೬ ಜನರನ್ನು ಸರ್ಕಾರದ ಆದೇಶದಂತೆ ಅವಧಿಪೂರ್ವ ಬಿಡುಗಡೆಗೊಳಿಸಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ. 
ಕೇಂದ್ರ ಕಾರಾಗೃಹದಲ್ಲಿ ಜು.೨೬ರಂದು ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಅವರು ಬಿಡುಗಡೆಯಾದ ಬಂದಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ, ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳುವಂತೆ ಶುಭ ಹಾರೈಸಿದರು.
ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಬಿ.ಎಂ.ಕೊಟ್ರೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರಾಗೃಹದ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.