ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ : ವೈ.ಎಸ್. ಜನವಾಡ

Jul 1, 2025 - 23:35
 0
ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ  : ವೈ.ಎಸ್. ಜನವಾಡ
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ‘ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಪ್ರತಿಯೊಬ್ಬ ತೆರಿಗೆದಾರರಿಗೂ ಹಂತ-ಹAತದ ಒಳನೋಟಗಳು’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸವನ್ನು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆAಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಹಾಗೂ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಮತ್ತಿತರರು ಉದ್ಘಾಟಿಸಿದರು.

ವಿಜಯಪುರ: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆ0ಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಹೇಳಿದರು.


ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ‘ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಪ್ರತಿಯೊಬ್ಬ ತೆರಿಗೆದಾರರಿಗೂ ಹಂತ-ಹAತದ ಒಳನೋಟಗಳು’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು. 

ಆದಾಯ ತೆರಿಗೆ ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತಿವೆ. ಇ-ಫೈಲಿಂಗ್ ಮಾಡುವ ವೇಳೆ ನಿಖರವಾದ ಮಾಹಿತಿ ಹಾಗೂ ದಾಖಲೆಗಳನ್ನು ನೀಡುವುದು ಅತ್ಯಂತ ಅಗತ್ಯ. ಯಾವುದೇ ತಪ್ಪುಗಳಿಲ್ಲದಂತೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಇಂತಹ ಪ್ರಯೋಗಾತ್ಮಕ ಕಾರ್ಯಕ್ರಮಗಳು ಅವಶ್ಯಕ. ವಿಶ್ವವಿದ್ಯಾನಿಲಯವು ಈ ನಿಟ್ಟಿನಲ್ಲಿ ಸದಾ ಪ್ರಯತ್ನಶೀಲವಾಗಿದೆ. ವಿದ್ಯಾರ್ಥಿಗಳು ಈ ಉಪನ್ಯಾಸದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಣೇಶ್ ಎಸ್.ಆರ್. ಸ್ವಾಗತಿಸಿದರು. ನಿರ್ವಹಣಾ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಿ.ಎಂ. ಮಠಪತಿ ವಂದಿಸಿದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.