ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜುಲೈ ೧೦ರಂದು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ಅಂದು ಬೆಳಿಗ್ಗೆ ೯.೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದವರೆಗೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.
ಬೆಳಿಗ್ಗೆ ೧೦.೩೦ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದು, ವಿಜಯಪುರ ನಗರದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ್ ಎನ್, ವಿಧಾನ ಪರಿಷತಿನ ಶಾಸಕರಾದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಡಾ.ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ವಿ.ಪಾಟೀಲ, ಹಣಮಂತ ಆರ್ ನಿರಾಣಿ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಎಮ್ ಮನಗೂಳಿ ಹಾಗೂ ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಪ್ ಹಾಗೂ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಬಿನ್ ಮೈಬೂಬ್ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ಬಿ ನಿಂಬರಗಿ ಅವರು ಉಪಸ್ಥಿತರಿರುವರು.À ಈ ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಡಾ.ಬಸವರಾಜ ಹಡಪದ ಅವರು ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶ್ರೀಮತಿ ವಿಶಾಲಾಕ್ಷಿ ಬಡಿಗೇರ ವಚನ ಗಾಯನ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.