ಭೀರಪ್ಪ ಹೊಸೂರಗೆ ಜಿಲ್ಲಾ ಪತ್ರಕರ್ತರ ಪ್ರಶಸ್ತಿ ಪ್ರಧಾನ

Jul 21, 2025 - 23:51
 0
ಭೀರಪ್ಪ ಹೊಸೂರಗೆ ಜಿಲ್ಲಾ ಪತ್ರಕರ್ತರ ಪ್ರಶಸ್ತಿ ಪ್ರಧಾನ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಇಂಡಿ: ಶನಿವಾರ ಜುಲೈ ೧೯ ರಂದು ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮAದಿ ರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರಧಾನ,ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಇಂಡಿ ತಾಲೂಕು ರವಿವಾಣಿ ಪ್ರಾದೇಶಿಕ ಕನ್ನಡ ದಿನ ಪತ್ರಿಕೆಯ ಹಿರಿಯ ಪತ್ರಕರ್ತ ಭೀರಪ್ಪ ಹೊಸೂರ ಅವರಿಗೆ ಜಿಲ್ಲಾ ಪತ್ರಕರ್ತರ ಪ್ರಶಸ್ತಿಯನ್ನು ಸಚಿವ ಎಂ ಬಿ ಪಾಟೀಲ ಸಚಿವ ಶಿವಾನಂದ ಪಾಟೀಲ ಪ್ರಧಾನ ಮಾಡಿದರು.        

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಡಿವೈಎಸ್ಪಿ ಬಸವರಾಜ ಯಲಿಗಾರ, ಕೆಯುಡಬ್ಲೂಜೆ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಸಂಘದ ಪ್ರಧಾನ ಕಾರ್ಯದರ್ಶಿ ಜಿ ಲೋಕೇಶ, ಭವಾನಿಸಿಂಗ್  ಠಾಕೂರ,ಹಿರಿಯ ಪತ್ರಕರ್ತ ಗೋಪಾಲ ನಾಯಕ,ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ,         

ಕಾನಿಪ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ,ಕಾನಿಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಾನಿಪ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಕೆ.ಕೆ. ಕುಲಕರ್ಣಿ, ಕೌಶಲ್ಯ ಪನಾಳಕರ ಇರಫಾನ ಶೇಖ್,ಗುರು ಲೋಕೋರೆ,ಹಿರಿಯ ಪತ್ರಕರ್ತ ಇಂದುಶೇಖರ ಮಣ್ಣೂರ ಕಾನಿಪ ಸಂಘದ ಸದಸ್ಯರು ಭಾಗವಹಿಸಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.