ಜಿಲ್ಲಾಡಳಿತದಿಂದ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮ : ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ : ಎಡಿಸಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಜಿಲ್ಲಾಡಳಿತದ ವತಿಯಿಂದ ಜೂನ್ ೨೭ರಂದು ನಾಡಪ್ರಭು ಕೆಂಪೇಗೌಡ ಜಯಂತಿ, ಜುಲೈ ೦೨ ರಂದು ಡಾ.ಪ.ಗು.ಹಳಕಟ್ಟಿ ಜನ್ಮದಿನಾಚರಣೆ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಜುಲೈ ೧೦ರಂದು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.
ಸೋಮವಾರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜೂನ್ ೨೭ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಹಾಗೂ ಜುಲೈ ೦೨ ರಂದು ಡಾ.ಪ.ಗು.ಹಳಕಟ್ಟಿ ಜನ್ಮದಿನಾಚರಣೆ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜುಲೈ ೧೦ರಂದು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯.೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊAದಿಗೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆ ಹಾಗೂ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಈ ಎಲ್ಲ ಜಯಂತಿ ಕಾರ್ಯಕ್ರಮಗಳಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಜಯಂತಿ ಅಂಗವಾಗಿ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅಭಿಷೇಕ ಚಕ್ರವರ್ತಿ, ಸೋಮನಗೌಡ ಕಲ್ಲೂರ, ಎಂ.ಬಿ.ಕಟ್ಟಿಮನಿ, ಬಸವರಾಜ ಶಿವಶರಣರ ಸೇರಿದಂತೆ ವಿವಿಧ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.