ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು : ಡಾ. ಎಂ. ಎಂ. ಪಾಟೀಲ

Jul 14, 2025 - 09:26
 0
ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು : ಡಾ. ಎಂ. ಎಂ. ಪಾಟೀಲ
ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ ಸಮಿತಿ ವತಿಯಿಂದ ಆಯೋಜಿಸಲಾಗಿದ ಅನುಸಂಧಾನ- 2025 ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಡಾ. ಸತೀಶ ಪಾಟೀಲ, ಡಾ. ಪ್ರಮೋದ ಬರಗಿ ಉಪಸ್ಥಿತರಿದ್ದರು.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ


ವಿಜಯಪುರ: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.

ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಅನುಸಂಧಾನ- 2025 ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.  

ವೇದಕಾಲದಿಂದಲೂ ಪ್ರಚಲಿತವಾಗಿದ್ದ ಆಯುರ್ವೇದ ಸಮಗ್ರ ವೈದ್ಯಕೀಯ ಶಾಸ್ತ್ರವಾಗಿದ್ದು, ಅದರಲ್ಲಿ ಸೂಚಿಸಿದ ಚಿಕಿತ್ಸೆ ಸೂತ್ರಗಳನ್ನು ಸಂಶೋಧನೆಯ ಮೂಲಕ ಇಂದಿನ ಆಧುನಿಕ ಜಗತ್ತಿಗೆ ಸಾಕ್ಷ ಸಮೇತ ತಿಳಿಸಿಕೊಡುವುದು ಅವಶ್ಯಕವಾಗಿದೆ.  ಹೀಗಾಗಿ ಯುವ ವೈದ್ಯರು ಕೇವಲ ಪದವಿ ಪಡೆಯಲು ಮಾತ್ರ ಸಂಶೋಧನ ಪ್ರಬಂಧವನ್ನು ಸೀಮಿತವಾಗಿಡದೇ ಉತ್ತಮ ಮಾರ್ಗದರ್ಶಕರ ಸಮ್ಮುಖದಲ್ಲಿ ಅಧ್ಯಯನ ನಡೆಸಿ ಉತ್ತಮ ಸಂಶೋಧನ ಪ್ರಬಂಧ ಸಿದ್ಧಪಡಿಸಿದಾಗ ಮಾತ್ರ ಆ ಸಂಶೋಧನೆಗೆ ನಿಜವಾದ ಬೆಲೆ ಸಿಗುತ್ತದೆ.  ಅಲ್ಲದೇ, ಅದು ಸಮಾಜಕ್ಕೂ ಸಹಾಯವಾಗುತ್ತದೆ.  ಈ ನಿಟ್ಟಿನಲ್ಲಿ ಸಂಶೋಧನ ಕುರಿತು ವಿಚಾರ ಸಂಕೀರ್ಣ ಆಯೋಜಿಸಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ ಎಂದು ಅವರು ತಿಳಿದರು.  

ಈ ನಿಟ್ಟಿನಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಸಂಶೋಧನ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಅದಕ್ಕಾಗಿ ಅನುದಾನ ಮತ್ತು ಸಂಶೋಧನ ಪ್ರಬಂಧಗಳನ್ನು ಪ್ರಕಟಿಸಲು ಉತ್ತೇಜನ ನೀಡುತ್ತಿದೆ.  ಯುವ ವೈದ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿಸಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾತನಾಡಿ, ಆಯುರ್ವೇದ ವೈದ್ಯ ಪದ್ಧತಿಯನ್ನು ಮುಂಚೂಣಿಯಲ್ಲಿ ತರುವಲ್ಲಿ ಭಾವಿ ವೈದ್ಯ ಸಂಶೋಧಕರ ಪಾತ್ರ ಮಹತ್ವದ್ದಾಗಿದೆ.  ಈ ನಿಟ್ಟಿನಲ್ಲಿ ಕೈಗೊಂಡಿರುವ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಯಶಸ್ವಿಯಾಗಿದೆ.  ಮುಂಬರುವ ದಿನಗಳಲ್ಲಿ ಇನ್ನು ದೊಡ್ಡ ಮಟ್ಟದ ವಿಚಾರ ಸಂಕಿರಣಗಳನ್ನು ಆಯೋಜಿಸಲು ಸ್ಪೂರ್ತಿ ನೀಡಿದೆ ಎಂದು ಹೇಳಿದರು.  

ಈ ವಿಚಾರ ಸಂಕೀರ್ಣದಲ್ಲಿ ಕರ್ನಾಟಕ ಮತ್ತು ಹೊರ ರಾಜ್ಯಗಳ ನೂರಕ್ಕೂ ಹೆಚ್ಚು ಸ್ನಾತಕೋತ್ತರ  ವೈದ್ಯ ವಿದ್ಯಾರ್ಥಿಗಳು ಹಾಗೂ ಸಂಶೋಧನ ಕೈಗೊಂಡಿರುವ ವೈದ್ಯ ವಿದ್ಯಾರ್ಥಿಗಳು  ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಶೈಕ್ಷಣಿಕ ಸಂಯೋಜಕ ಡಾ. ಕೆ. ಎ. ಪಾಟೀಲ, ಡಾ.  ಕಾಶಿನಾಥ ಹದಿಮೂರ, ಡಾ. ವಿದ್ಯಾ ಪೂಜಾರಿ, ಡಾ. ಅನೀಸ್ ಮದನಿ, ಡಾ. ಅಶ್ವಿನಿ ಸಜ್ಜನವರ, ಡಾ. ಶೃತಿ ಹಿರೇಮಠ, ಡಾ. ಮಂಜುಳಾ ಹಯ್ಯಾಳಕರ, ಚೇತನ ಮುಂತಾದವರು ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.

ಕಾರ್ಯಕ್ರಮ ಆಯೋಜಕ ಡಾ. ಸತೀಶ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.  ಡಾ. ಭಾಗ್ಯಶ್ರೀ ಮತ್ತು ಡಾ. ನೇತ್ರಾವತಿ ನಿರೂಪಿಸಿದರು.  ಡಾ. ಪ್ರಮೋದ ಬರಗಿ ವಂದಿಸಿದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.