ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ : ಸಿಇಓ ರಿಷಿ ಆನಂದ

Jul 28, 2025 - 23:21
 0
ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ : ಸಿಇಓ ರಿಷಿ ಆನಂದ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಸೋಮವಾರ ಜಿಲ್ಲೆಯ ಬಸವನ ಬಾಗೇವಾಡಿ ಮತ್ತು ನಿಡಗುಂದಿ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬಸವನ ಬಾಗೇವಾಡಿ  ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ  ಹಾಗೂ ನಿಡಗುಂದಿ ತಾಲೂಕಿನ ಚಿಮ್ಮಲಗಿ ಎಲ್ ಟಿ, ಮರಿಮಟ್ಟಿ,  ಆಲಮಟ್ಟಿ, ಆಲಮಟ್ಟಿ ವಸ್ತಿ, ಬೇನಾಳ ಆರ್.ಸಿ, ಗುಡದಿನ್ನಿ, ಹುಣಶ್ಯಾಳ್ ಪಿ ಸಿ,  ಬೀರಲದಿನ್ನಿ ಹಾಗೂ ಗೊಳಸಂಗಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿದ ಅವರು, ಮನೆ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂಪರ್ಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು.
 
ಮಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರ  ಗ್ರಾಮದಲ್ಲಿನ ೪೨೨ ಈಊಖಿಅ ಗಳನ್ನು ಒದಗಿಸುವ  ಕಾಮಗಾರಿ ವೀಕ್ಷಿಸಿ ಮನೆಗಳಿಗೆ ಅಳವಡಿಸಿರುವ ನಳಗಳನ್ನು ಪರೀಕ್ಷಿಸಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿರುವ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು.
ಮಣ್ಣೂರ ಗ್ರಾಮದಲ್ಲಿ ೪೩೦ಎಫ್ ಎಚ್ ಟಿ ಸಿ ಗಳನ್ನು ಒದಗಿಸುವ  ಗುರಿಯನ್ನು ಹೊಂದಿದ್ದು ಪ್ರಗತಿ ಹಂತದಲ್ಲಿರುವ ಕಾಮಗಾರಿ ವೀಕ್ಷಿಸಿ ಕಾರ್ಯಾತ್ಮಕ ನಳಗಳನ್ನು ಅಳವಡಿಸಲು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಅಭಿಯಂತರರಿಗೆ ಹಾಗೂ ಗ್ರಾಮದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು. ಬಳಿಕ ಜೆಜೆಮ್ ಕಾಮಗಾರಿಯನ್ನು ಪರಿಶೀಲನೆ ಮಾಡಿದರು.
ಮಣ್ಣೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಂಗರಗಿ ಗ್ರಾಮದಲ್ಲಿ  ೪೯೮ ಈಊಖಿಅ ಗುರಿ  ಎದುರು, ಅಳವಡಿಕೆಯಾಗಿರುವ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಗ್ರಾಮದಲ್ಲಿನ ಮನೆಗೆ ಅಳವಡಿಸಿರುವ ನಳ ಸಂಪರ್ಕದ ಕುರಿತು ಸ್ಥಳೀಯ ಫಲಾನುಭವಿಗಳ ಜೊತೆ ಚರ್ಚೆ ಮಾಡಿ  ಸಮರ್ಪಕ ನೀರು ಪೂರೈಕೆಯಾಗುತ್ತಿರುವ ಕುರಿತು ಮಾಹಿತಿ ಪಡೆದ ಅವರು, ನೀರನ್ನು ಪೋಲು ಮಾಡದೆ ವ್ಯವಸ್ಥಿತವಾಗಿ ಬಳಸಬೇಕು. ಪೋಲಾಗುತ್ತಿರುವ ನಲ್ಲಿಗಳಿಗೆ ತುರ್ತಾಗಿ ನಲ್ಲಿಗಳ ಜೋಡಣೆ ಮಾಡುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 
ಈ ಸಂದರ್ಭದಲ್ಲಿ ನಿಡಗುಂದಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಬಸವನ ಬಾಗೇವಾಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ  ಪ್ರಕಾಶ ದೇಸಾಯಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ  ಕಾರ್ಯನಿರ್ವಾಹಕ ಅಭಿಯಂತರರಾದ  ಬಸವರಾಜ ಕುಂಬಾರ, ಸಹಾಯಕ ಅಭಿಯಂತರ ವಿ.ಬಿ.ಗೊಂಗಡಿ, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಶ್ರೀನಿವಾಸ, ಪಿಡಿಒ ರವಿ ಗುಂಡಳ್ಳಿ, ಆಲಮಟ್ಟಿ ಗ್ರಾಮ ಪಂಚಾಯತಿ ಪಿಡಿಒ ಜಿ.ಬಿ.ಕಲ್ಯಾಣಿ, ವಂದಾಲ ಗ್ರಾಮ ಪಂಚಾಯತಿ ಪಿಡಿಒ ಮಲ್ಲಿಕಾರ್ಜುನ ಹಾವರಗಿ, ಬೇನಾಳ ಗ್ರಾಮ ಪಂಚಾಯತಿ ಪಿಡಿಒ ಎ.ಎ.ಕೀಜಿ, ಬೇನಾಳ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ ವಂದಾಲ, ಮಣ್ಣೂರು ಗ್ರಾಪಂ ಪಿಡಿಒ  ಎಸ್ .ವೈ. ಕುಂಬಾರ ಹಾಗೂ ಇತರರು ಉಪಸ್ಥಿತರಿದ್ದರು.
Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.