ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಭಾನುವಾರ ತಿಕೋಟಾ ಹಾಗೂ ಬಬಲೇಶ್ವರ ತಾಲೂಕಿನ ಜಲ್ ಜೀವನ್ ಮಿನ್ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.
ವಿಜಯಪುರ ತಾಲೂಕಿನ ಖತಿಜಾಪುರ,ಬಬಲೇಶ್ವರ ತಾಲೂಕಿನ ಸಾರವಾಡ, ಹಲಗಣಿ ಮತ್ತು ನಿಡೋಣಿ, ತಿಕೋಟಾ ತಾಲೂಕಿನ ಬಾಬಾನಗರ ಮತ್ತು ಘೊಣಸಗಿ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ, ಯೋಜನೆ ಕುರಿತು ಮಾಹಿತಿ ಪಡೆದರು. ಪ್ರತಿದಿನ ನೀರು ಸರಬರಾಜಾಗುವ ಕುರಿತು ವಿಚಾರಿಸಿದರು. ನೀರನ್ನು ಮಿತವಾಗಿ ಬಳಸಿ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಗ್ರಾಮಸ್ಥರಿಗೆ ಹೇಳಿದರು. ಕೆಲವು ಮನೆಗಳಲ್ಲಿ ನಳ ಸಂಪರ್ಕಗಳಲ್ಲಿ ನೀರು ಮೀಟರ್ ಮೂಲಕ ಬಾರದೆ ನೇರವಾಗಿ ಪಡೆಯುತ್ತಿರುವುದನ್ನು ಗಮನಿಸಿದ ಅವರು, ಬೈಪಾಸ್ ಆದಂತಹ ಸಂಪರ್ಕಗಳನ್ನು ಗ್ರಾಮ ಪಂಚಾಯಿತಿಯವರು ಕೂಡಲೇ ಮರುಜೋಡಣೆ ಹಾಗೂ ಈ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಸಹ ನಿಗಾವಹಿಸುವಂತೆ ಸೂಚಿಸಿದರು.
ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನೀಡಲಾದ ಹೊಸ ನಳ ಸಂಪರ್ಕಗಳ ಮೂಲಕ ನೀರನ್ನು ಪೂರೈಸಲು ಗ್ರಾಮ ಪಂಚಾಯಿತಿಯವರಿಗೆ ಸೂಚಿಸಿದ ಅವರು, ಎಲ್ಲ ಗ್ರಾಮಗಳಲ್ಲಿನ ಶಾಲೆ ಮತ್ತು ಅಂಗನವಾಡಿಗಳಿಗೆ ನೀರಿನ ಸಂಪರ್ಕ ಒದಗಿಸಿರುವುದನ್ನು ಖುದ್ದು ಖಾತರಿ ಪಡಿಸಿಕೊಂಡರು. ನೀರು ಪೂರೈಸುವ ಪೂರ್ವದಲ್ಲಿ ನಿಯಮಿತವಾಗಿ ಕಡ್ಡಾಯವಾಗಿ ಪರೀಕ್ಷಿಸಿದ ನಚಿತರ ಖಾತ್ರಿಪಡಿಸಕೊಂಡು ನೀರು ಪೂರೈಸಬೇಕು. ಯಾವುದೇ ಸಮಸ್ಯೆ ಉದ್ಭವವಾದರೆ ಸಂಬAಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಕಟ್ಟುನಿಟ್ಟಾಗಿ ಸೂಚಿಸಿದರು.
ಒವರ್ ಹೆಡ್ ಟ್ಯಾಂಕಗಳÀನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಕ್ರಮವಹಿಸುವುದರ ಜೊತೆಗೆ ಹಾಗೂ ಕ್ಲೋರಿನೇÀನ್ ಮಾಡಲು ತಿಳಿಸಿದರು. ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದು. ಯಾವುದೇ ದುರಸ್ತಿಗಳು ಕಂಡು ಬಂದಲ್ಲಿ ಕೂಡಲೇ ಕ್ರಮ ವಹಿಸಲು ಸಂಬAಧಿಸಿದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಶಾಖಾಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಮನೆಗೆ ನೀರು ಸರಿಯಾದ ಪ್ರಮಾಣದಲ್ಲಿ ಪೂರೈಕೆಯಾಗುವುದನ್ನು ಖಾತರಿಪಡಿಸಿಕೊಳ್ಳಬೇಕು ಹಾಗೂ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲು ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗೆ ಯೋಜನೆ ಹಸ್ತಾಂತರಗೊAಡ ನಂತರ ಯೋಜನೆಯನ್ನು ಸರಿಯಾಗಿ ನಿರ್ವಹಣೆಯು ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಆದಷ್ಟು ಬೇಗ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿಯನ್ನು ಅಳವಡಿಸಿಕೊಳ್ಳಲು ಸೂಚಿಸಿದರು. ಹಾಲಿ ಇರುವ ಮನೆಗಳ ಸಂಖ್ಯೆ ಹೆಚ್ಚಾದಾಗ ಅಥವಾ ಕಡಿಮೆ ಇದ್ದಲ್ಲಿ ವಿಭಾಗ ಕಚೇರಿಗೆ ಐಎಂಎಸ್‌ನಲ್ಲಿ ತಿದ್ದುಪಡಿಗೊಳಿಸಲು ಮಾಹಿತಿಯನ್ನು ವಿಭಾಗ ಕಚೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಿಕೋಟಾ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತ್ರಾಯಗೌಡ ಬಿರಾದಾರ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ್ ಕುಂಬಾರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಎಸ್ ಬಿ ಪಾಟೀಲ ಹಾಗೂ ಶಾಖಾಧಿಕಾರಿಗಳಾದ ಶೀಲವಂತ ಹಾಗೂ ಎಂ ವೈ ವಗ್ಗರ್ ಸ್ಭೆರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.