ನಳ ಸಂಪರ್ಕ ಒದಗಿಸಿ ನೀರು ಕೊಡಲು ಕ್ರಮ ವಹಿಸಿ : ಜಿ.ಪಂ. ಸಿಇಓ ರಿಷಿ ಆನಂದ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಜುಲೈ ೨೮ ರಂದು ಕೊಲ್ಹಾರ ತಾಲೂಕಿನ ತೆಲಗಿ, ರೋಣಿಹಾಳ ಮತ್ತು ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಲಗಿ ಎಲ್ ಟಿ, ಚೀರಲದಿನ್ನಿ ರೋಣಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೋಣಿಹಾಳ, ಕುಪಕಡ್ಡಿ ಗ್ರಾಮಕ್ಕೆ ಹಾಗೂ ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಳವಾಡ ಸ್ಟೇಶನ್ ಮುಳವಾಡ ಗ್ರಾಮ, ತಿಕೋಟಾ ತಾಲೂಕಿನ ಬರಟಗಿ ಎಲ್.ಟಿ ಹಾಗೂ ವಿಜಯಪುರ ತಾಲೂಕಿನ ತಿಡಗುಂದಿ, ಡೊಮ್ಮನಾಳ, ಮತ್ತು ಡೊಮ್ಮನಾಳ,ಎಲ್ ಟಿ-೧ ಮತ್ತು ಡೊಮ್ಮನಾಳ ಎಲ್ ಟಿ-೨ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.
ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಕೈಗೊಂಡ ಪ್ರತಿ ಗ್ರಾಮಗಳಿಗೆ ಪ್ರತಿ ಮನೆ - ಮನೆಗಳಿಗೆ ನಳಗಳ ಸಂಪರ್ಕ ಮೂಲಕ ನೀರು ಪ್ರತಿದಿನ ಪೂರೈಕೆ ಆಗುತ್ತಿರುವ ಕುರಿತು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಗಳಲ್ಲಿ ಅನುನಗೊಂಡಿರುವ ಜಲಜೀವನ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಉತ್ತಮ ಕಾಮಗಾರಿಗಳು ಪೂರ್ಣಗೊಂಡಿದ್ದರಿAದ ನಿಮ್ಮ ಮನೆ-ಮನೆಗೆ ಬಂದ ನೀರನ್ನು ಸದ್ಭಳಕೆ ಮಾಡುವ ಮೂಲಕ ಗ್ರಾಮಸ್ಥರು ಮಿತವಾಗಿ ಬಳಸಿ, ಸ್ವಚ್ಛತೆ ಕಾಪಾಡುವುದರ ಮೂಲಕ ದಿನನಿತ್ಯ ನೀರು ಉಪಯೋಗಿಸಿಕೊಳ್ಳಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.
ಒವರ್ ಹೆಡ್ ಟ್ಯಾಂಕ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿದರು. ಜೊತೆಗೆ ನೀರಿನ ಟ್ಯಾಂಕಗಳ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಕೊಡಿ, ಪ್ರಗತಿಯಲ್ಲಿರುವ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಜನರಿಗೆ ನಳ ಸಂಪರ್ಕ ಒದಗಿಸಿ ನೀರು ಕೊಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀರನ್ನು ಪೂರೈಕೆ ಮಾಡುವ ಪೂರ್ವದಲ್ಲಿ ನಿಯಮಿತವಾಗಿ ನೀರು ಪರೀಕ್ಷಿಸಲು ಹಾಗೂ ಓವರ್ ಹೆಡ್ ಟ್ಯಾಂಕಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಹಾಗೂ ಕ್ಲೋರಿನೇಷನ್ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಹಾಗೂ ಸಂಬoಧ ಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಶಾಖಾಧಿಕಾರಿಗಳಿಗೆ ಯಾವುದೇ ದುರಸ್ತಿ ಕಾರ್ಯಗಳು ಇದ್ದಲ್ಲಿ ಕೂಡಲೇ ಕ್ರಮ ವಹಿಸಲು ಸೂಚಿಸಿದರು.ಪ್ರತಿ ಮನೆಗೆ ನೀರು ಸರಿಯಾದ ಪ್ರಮಾಣದಲ್ಲಿ ಪೂರೈಸಸುವುದನ್ನು ಖಾತ್ರಿ ಪಡಿಸಿಕೊಳ್ಳಲು ಸೂಚನೆ ನೀಡಿದರು. ಈ ಯೋಜನೆಯನ್ನು ಸರಿಯಾಗಿ ನಿರ್ವಹಣೆ ಮಾಡುವುದು ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಹಾಜರಿದ್ದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗದ0ತೆ ನಿರ್ವಹಣೆ ಮಾಡುವಂತೆ ಸಂಬ0ಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ ಕುಂಬಾರ, ಕೊಲ್ಹಾರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುನೀಲ ಮುದ್ದಿನ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ವಿ. ಬಿ. ಗೊಂಗಡಿ, ಎಸ್. ಬಿ. ಪಾಟೀಲ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಂಜುಳಾ ಘಂಟಿ, ವ್ಹಿ. ಎಸ್. ನಾಯಕ ದಸ್ತಗಿರಸಾಬ್ ಬಿಳಿಕುದರೆ, ಸುಕನ್ಯಾ ಲಂಬು, ರಾಘವೇಂದ್ರ ಪಂಚಾಳ್, ಕಾರ್ಯದರ್ಶಿ ಶೋಭಾ ಪತ್ತಾರ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.