ಕೇಂದ್ರ ಬಸ್ ನಿಲ್ದಾಣದಲ್ಲಿ ಮಾಹಿತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ಉದ್ಘಾಟನೆ

Jun 20, 2025 - 21:46
 0
ಕೇಂದ್ರ ಬಸ್ ನಿಲ್ದಾಣದಲ್ಲಿ ಮಾಹಿತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ಉದ್ಘಾಟನೆ

ವಿಜಯಪುರ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ   ಪ್ರಪ್ರಥಮವಾಗಿ ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ  ಸ್ಥಾಪಿಸಲಾದ ಸಾರ್ವಜನಿಕ ಪ್ರಯಾಣಿಕರಿಗೆ ಸಂಬAಧಿಸಿದ ಮಾಹಿತಿ ಒದಗಿಸುವ ವಿಶೇಷ ಮಾಹಿತಿ ಕೇಂದ್ರವನ್ನು ಶುಕ್ರವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾಹಿತಿಯನ್ನು ಕೇಳುವ ಮೂಲಕ ಉದ್ಘಾಟಿಸಿದರು. 
    ಈ ಮಾಹಿತಿ ಕೇಂದ್ರದಲ್ಲಿ ವಿಜಯಪುರ ಜಿಲ್ಲೆ ಮತ್ತು ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಚರಣೆ ಆಗುವ ಎಲ್ಲಾ ಬಸ್ಸುಗಳ ಮಾಹಿತಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ದೊರೆಯುವ ಎಲ್ಲ ಸವಲತ್ತುಗಳ ಕುರಿತು ಪ್ರಯಾಣಿಕರಿಗೆ ಈ ಕೇಂದ್ರದಿAದ ಮಾಹಿತಿ ದೊರೆಯಲಿದೆ. 
    ಈ ಮಾಹಿತಿ ಕೇಂದ್ರದಲ್ಲಿ ಎರಡು ಪಾಳೆಯಲ್ಲಿ ಇಬ್ಬರು ಮಹಿಳಾ ಸಂಚಾರ ನಿಯಂತ್ರಕರು ಕರ್ತವ್ಯ ನಿರ್ವಹಿಸಲಿದ್ದಾರೆ.  ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಮುಂಗಡ ಬುಕ್ಕಿಂಗ್ ಮಾಡಿಕೊಳ್ಳುವ ಕುರಿತು ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಬುಕ್ ಮಾಡುವ ವಿಧಾನ ಕುರಿತು ಕೇಂದ್ರದಲ್ಲಿ ಮಾಹಿತಿ ದೊರೆಯಲಿದೆ.
    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ವಿವಿಧ ಮಾರ್ಗಗಳಿಗೆ ಸಂಚರಿಸುವ ಅನುಸೂಚಿಗಳ ಕುರಿತು ಮಾಹಿತಿ ಪಡೆದುಕೊಂಡರು. ಬಸ್ ನಿಲ್ದಾಣದಲ್ಲಿ ದೊರೆಯುವ ಸವಲತ್ತುಗಳ ಕುರಿತು ಮಾಹಿತಿಯನ್ನು ಪಡೆದುಕೊಂಡ ಅವರು,  ಕೇಂದ್ರ ಬಸ್ ನಿಲ್ದಾಣದಲ್ಲಿ ಮಾಹಿತಿ ಕೇಂದ್ರವನ್ನು ಸ್ಥಾಪಿಸಿರುವುದರಿಂದ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು  ಅವರು ಹರ್ಷ ವ್ಯಕ್ತಪಡಿಸಿದರು.
    ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಾರಿಗೆ ಅಧಿಕಾರಿಗಳಾದ ಎಂ ಎಸ್ ಹಿರೇಮಠ್, ಬಸ್ ನಿಲ್ದಾಣದ ವ್ಯವಸ್ಥಾಪಕ ಕೆ.ಕೆ. ಹುಗ್ಗೆನವರ್ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.