ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಮಳೆಗಾಲ ಪ್ರಾರಂಭವಾಗಿರುವುದರಿAದ ಎದುರಾಗಬಹುದಾದ ತುರ್ತು ಪರಿಸ್ಥಿತಿ-ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮುನ್ನೆಚ್ಚರಿಕೆಯಾಗಿ ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕೇಸ್ವಾನ್ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ನಿಯೋಜಿಸಲಾದ ನೋಡಲ್ ಅಧಿಕಾರಿಗಳು ಹಾಗೂ ವಿವಿಧ ತಾಲೂಕಾ ತಹಶೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಅವರು ಸೂಚನೆ ನೀಡಿದರು.
ನಿಗದಿತ ಕಾಲಾವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ : ಮಳೆಗಾಲದ ಸಂದರ್ಭದಲ್ಲಿ ಗಿಡ-ಮರಗಳು ಬಿದ್ದು, ಯಾವುದೇ ಹಾನಿ ಸಂಭವಿಸದAತೆ ಇಂತಹ ಪ್ರದೇಶಗಳಲ್ಲಿ ಅಗತ್ಯ ಕ್ರಮ ವಹಿಸಬೇಕು. ಮಳೆ-ಗಾಳಿ ರಭಸಕ್ಕೆ ವಿದ್ಯುತ್ ತಂತಿ ಹರಿದು ಬಿದ್ದ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆ ಅಧಿಕಾರಿಗಳು ತಕ್ಷಣ ಇಂತಹ ಅಪಾಯವನ್ನುಂಟು ಮಾಡುವ ತಂತಿ, ಕಂಬಗಳ ತೆರವುಗೊಳಿಸ ಕ್ರಮ ವಹಿಸಬೇಕು. ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಹಾನಿವುಂಟಾದಲ್ಲಿ ನಿಗದಿತ ಕಾಲಾವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಪ್ರವಾಹ ಪರಿಸ್ಥಿತಿಯನ್ನು ಎಲ್ಲ ರೀತಿಯಲ್ಲಿ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜನ-ಜಾನುವಾರುಗಳ ರಕ್ಷಣೆ, ಪುರ್ನವಸತಿ, ಪರಿಹಾರ ಕೇಂದ್ರಗಳ ಸ್ಥಾಪನೆ ಸೇರಿದಂತೆ ಮುಂಜಾಗ್ರತೆಯಾಗಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದ ಅವರು, ರಕ್ಷಣಾ ಸಾಮಗ್ರಿಗಳನ್ನು ಸುಸಜ್ಜಿತವಾಗಿಟ್ಟುಕೊಳ್ಳಬೇಕು. ನುರಿತ ಈಜುಗಾರರು, ಹಾವಾಡಿಗರು ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಟ್ಟುಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು, ಸಂಬAಧಿಸಿದ ತಾಲೂಕುಗಳಿಗೆ ಭೇಟಿ ನೀಡಿ ಗ್ರಾಮಗಳ ಪರಿಸ್ಥಿತಿಯನ್ನು ಅವಲೋಕಿಸಬೇಕು. ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ, ತಾಲೂಕುಗಳಲ್ಲಿ ನಡೆದ ಸಭೆಗಳ ಮಾಹಿತಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಸಭೆಗಳಲ್ಲಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು. ಪ್ರವಾಹ ಪೀಡಿತ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿಕೊಂಡು ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಸೇರಿದಂತೆ ಸ್ವಚ್ಛವಾಹಿನಿ ಮೂಲಕ ಜನರಿಗೆ ಜಾಗೃತಿ-ಅರಿವು ಮೂಡಿಸಬೇಕು.
ಕೆರೆ ತುಂಬಿದ ಸಂದರ್ಭದಲ್ಲಿ ಆಯಾ ಪ್ರದೇಶದ ಜನರು ಕೆರೆಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಬೇಕು. ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು- ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದು, ತಾಲೂಕಾ ಮಟ್ಟದಲ್ಲಿಯೂ ಸಹ ಸಹಾಯವಾಣಿ ಆರಂಭಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು. ಪ್ರವಾಹ ಎದುರಾದ ಸಂದರ್ಭದಲ್ಲಿ ಪ್ರತಿದಿನ ಗ್ರಾಮದ ಪರಿಸ್ಥಿತಿ ಕುರಿತು ವರದಿ ಸಲ್ಲಿಸಬೇಕು. ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು. ಪ್ರಕೃತಿ ವಿಕೋಪ ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾದÀಲ್ಲಿ ಸಂಬAಧಿಸಿದ ಅಧಿಕಾರಿಗಳ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಮಳೆಗಾಲ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವುದರಿAದ ಮುಂಚಿತವಾಗಿಯೇ ನಿಯಂತ್ರಣಕ್ಕಾಗಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮಳೆ ನೀರು ಒಂದೆಡೆ ನಿಲ್ಲದಂತೆ ನೋಡಿಕೊಳ್ಳುವಂತೆ ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು. ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಾಗೂ ಪಾಲಿಕೆ ವ್ಯಾಪ್ತಿಯ ವಿಫಲ ಕೊಳವೆ ಬಾವಿಗಳನ್ನು ಗುರುತಿಸಿ, ಸ್ಲಾö್ಯಬ್ ಮತ್ತು ಕಾಂಕ್ರಿಟ್ ಹಾಕುವ ಮೂಲಕ ಮುಚ್ಚಲು ಕ್ರಮ ವಹಿಸಬೇಕು. ಯಾವುದೇ ಅಹಿತಕರÀ ಘಟನೆ ಸಂಭವಿಸದAತೆ ಮುಂಜಾಗ್ರತೆ ವಹಿಸಬೇಕು. ಈ ಕಾರ್ಯದಲ್ಲಿ ಅಧಿಕಾರಿಗಳು ನಿರ್ಲಕ್ಷö್ಯ ತೋರಬಾರದು. ಯಾವುದೇ ಘಟನೆ ಸಂಭವಿಸಿದ್ದಲ್ಲಿ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಭೀಮಾ, ಕೃಷ್ಣಾ ಹಾಗೂ ಡೋಣಿ ನದಿ ಎದುರಾಗಬಹುದಾದ ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು, ತುರ್ತು ಸಂದರ್ಭಗಳಲ್ಲಿ ಪುನರ್ವಸತಿಗೆ ಪರಿಹಾರ ಕೇಂದ್ರಗಳ ಸ್ಥಾಪನೆ ಸೇರಿದಂತೆ ರಕ್ಷಣಾ ಕಾರ್ಯ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರನ್ವಯ ತಾಲೂಕಾ ನೊಡಲ್ ಅಧಿಕಾರಿಗಳೆಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿಜಯಪುರ ತಾಲೂಕಿಗೆ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರರಾದ ಸಿ.ಎಸ್.ಪೊಲೀಸ್‌ಪಾಟೀಲ ಮೊ:೯೦೦೮೧೧೨೯೬೪, ಬಬಲೇಶ್ವರ ತಾಲೂಕಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ಪೂಜಾರಿ ಮೊ: ೯೮೪೪೮೪೯೨೩೮, ತಿಕೋಟಾ ತಾಲೂಕಿಗೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲಕುಮಾರ ಭಾವಿದೊಡ್ಡಿ ಮೊ: ೯೪೪೮೯೯೯೨೩೨, ಬಸವನಬಾಗೇವಾಡಿ ತಾಲೂಕಿಗೆ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ಮೊ:೯೪೪೮೩೯೨೦೦೫, ಕೊಲ್ಹಾರ ತಾಲೂಕಿಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಂ.ಎಚ್.ಬಾAಗಿ ಮೊ:೯೬೮೬೧೩೨೭೧೭, ಇಂಡಿ ತಾಲೂಕಿಗೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಮೊ: ೮೮೬೧೩೦೮೪೪೪, ಮುದ್ದೇಬಿಹಾಳ ತಾಲೂಕಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಜಿಸ್ಟಾçರ್ ಶಂಕರಗೌಡ ಸೋಮನಾಳ ಮೊ: ೯೪೪೮೩೩೬೪೩೯, ತಾಳಿಕೋಟೆ ತಾಲೂಕಿಗೆ ಜಂಟಿ ಕೃಷಿ ನಿರ್ದೇಶಕರಾದ ಶ್ರೀಮತಿ ಎಲ್ ರೂಪಾ ಮೊ: ೮೨೭೭೯೩೦೬೦೧, ನಿಡಗುಂದಿ ತಾಲೂಕಿಗೆ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಎಸ್.ಕೆ ಭಾಗ್ಯಶ್ರೀ ಮೊ:೭೭೯೫೩೮೭೨೧೭, ಚಡಚಣ ತಾಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಮೊ: ೯೮೪೪೮೫೦೪೧೧, ಸಿಂದಗಿ ತಾಲೂಕಿಗೆ ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯ ಪಾಟೀಲ ಮೊ: ೮೯೫೧೪೨೦೩೯೯, ದೇವರಹಿಪ್ಪರಗಿ ತಾಲೂಕಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಶಂಕರ ಕೊಳ್ಳಿ ಮೊ:೮೬೧೮೪೯೭೨೫೩ ಹಾಗೂ ಆಲಮೇಲ ತಾಲೂಕಿಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ ಮೊ:೯೦೦೮೩೪೯೧೫೦ ಇವರನ್ನು ನೇಮಕ ಮಾಡಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಸೇರಿದಂತೆ ವಿವಿಧ ನೋಡಲ್ ಅಧಿಕಾರಿಗಳು, ವಿವಿಧ ತಾಲೂಕಾ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.