ದಾಖಲೆಗಳನ್ನು ಸಮರ್ಪಕವಾಗಿ ದಾಖಲೀಕರಣಗೊಳಿಸಿ : ಜಿಲ್ಲಾಧಿಕಾರಿ ಡಾ.ಆನಂದ ಕೆ

Aug 16, 2025 - 22:24
Aug 17, 2025 - 09:51
 0
ದಾಖಲೆಗಳನ್ನು ಸಮರ್ಪಕವಾಗಿ ದಾಖಲೀಕರಣಗೊಳಿಸಿ : ಜಿಲ್ಲಾಧಿಕಾರಿ ಡಾ.ಆನಂದ ಕೆ
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಶನಿವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 
ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಶನಿವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.
ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇ ಪೌತಿ ಖಾತೆ ಪ್ರಗತಿ, ದರಖಾಸ್ತು ಪೌಡಿ ಕಡತ ಪರಿಶೀಲಿಸಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭೂಸುರಕ್ಷಾ ಯೋಜನೆಯ ಪ್ರಗತಿ ಸಾಧಿಸುವಂತೆಯೂ, ದಾಖಲೆಗಳನ್ನು ಸಮರ್ಪಕವಾಗಿ ದಾಖಲೀಕರಣಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ತಿಕೋಟಾದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಕ್ಕಳ ಹಾಜರಾತಿ, ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು. ಶುದ್ಧ ಕುಡಿಯುವ ನೀರು ಒದಗಿಸಬೇಕು. ಶೌಚಾಲಯ ವ್ಯವಸ್ಥೆ ಹಾಗೂ ಆವರಣ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯ ದೃಷ್ಟಿಯಿಂದ ಆಗಾಗ ಆರೋಗ್ಯ ತಾಪಸಣೆ, ಮಕ್ಕಳು ಹೆಚ್ಚು ಅಧ್ಯಯನಶೀಲತೆ ರೂಢಿಸಿಕೊಳ್ಳುವಂತೆ ಅವರಿಗೆ ಪ್ರೆರೇಪಿಸಬೇಕು. ಮೂಲಭೂತ ಸೌಲಭ್ಯ ಕೊರತೆಯಾಗದಂತೆ ಖಚಿತಪಡಿಸಿಕೊಳ್ಳಬೇಕು. 
 
ತಿಕೋಟಾ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿ, ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ0ತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇ-ಆಸ್ತಿಗೆ ಸಂಬAಧಿಸಿದ ಕಡತ ಪರಿಶೀಲಿಸಿದ ಅವರು, ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು. ತಿಕೋಟಾ ಉಪ ನೋಂದಣಿ ಕಾರ್ಯಾಲಯಲಕ್ಕೆ ಹಾಗೂ ಭೂ ದಾಖಲೆಗಳ ಇಲಾಖೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಚನಗೊಂಡ, ಭೂ ದಾಖಲೆಗಳ ಎಡಿಎಲ್‌ಆರ್ ರೂಢಗಿ, ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ರಘು ನಡುವಿನಕೇರಿ ಸೇರಿದಂತೆ ಸೇರಿದಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಇದ್ದರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.