ದಿ.ಡಿ.ದೇವರಾಜ್ ಅರಸು ನಾಡು ನುಡಿಗಾಗಿ ಶ್ರಮಿಸಿದ್ದಾರೆ : ಜಿಲ್ಲಾಧಿಕಾರಿ ಡಾ.ಆನಂದ.ಕೆ

Aug 20, 2025 - 21:17
 0
ದಿ.ಡಿ.ದೇವರಾಜ್ ಅರಸು ನಾಡು ನುಡಿಗಾಗಿ ಶ್ರಮಿಸಿದ್ದಾರೆ : ಜಿಲ್ಲಾಧಿಕಾರಿ ಡಾ.ಆನಂದ.ಕೆ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 
ವಿಜಯಪುರ :  ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ವಿದ್ಯಾವಂತ ನಿರುದ್ಯೋಗಿಗಳಿಗೆ ಭತ್ಯೆ ಸೈಫಂಡರಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ಪರಿವರ್ತನೆಯ ಹರಿಕಾರರಾದರು. ಡಿ.ದೇವರಾಜ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ, ಅವರು ನಾಡು ನುಡಿಗಾಗಿ ಶ್ರಮಿಸಿದ್ದಾರೆ. ಅಪೂರ್ವ ಚಿಂತನಾಶೀಲದ ಅವರ ಆದರ್ಶ ವಿಚಾರಗಳು ಅವರ ತತ್ವ ಸಿದ್ಧಾಂತ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬುಧವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೧೦ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಅವರು ಮಾತನಾಡಿದರು. ಡಿ.ದೇವರಾಜ ಅರಸು ಅವರು ಕರ್ನಾಟಕ ಕಂಡ ಓರ್ವ ಧೀಮಂತ ನಾಯಕ, ಅವರು ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ವಸತಿ ನಿಲಯಗಳ ಸ್ಥಾಪನೆಗೆ ಕಾರಣೀಕರ್ತರಾಗಿದ್ದಾರೆ. ಅರಸು ಅವರ ದೂರದೃಷ್ಟಿಯ ಫಲದಿಂದ ಈ ಯೋಜನೆಗಳು ಇಂದಿಗೂ ಅನೇಕರ ಬಾಳು ಹಸನಗೊಳಿಸಿವೆ. ಭೂ ಸುಧಾರಣಾ ಕಾಯ್ದೆ ರಾಜ್ಯದಲ್ಲಿ ಪರಿಣಾಮಕಾರಿ ಅನುಷ್ಠಾÀಗೊಂಡಿದೆ. ಅವರ ಆದರ್ಶ ವಿಚಾರಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಈ ವೇಳೆ ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮಂಜುನಾಥ ಜುನಗೊಂಡ ಆವರು ಮಾತನಾಡಿದರು. 
ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ರಂಗನಾಥ ಬತಾಶೆ ಹಾಗೂ ತಂಡದಿAದ ನೃತ್ಯಕಲಾ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮೇಯರ್ ಎಂ.ಎಸ್.ಕರಡಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ್ ಬೋರಾಮಣಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಪಾಲಿಕೆ ಉಪ ಆಯುಕ್ತ ವೈ.ಎಚ್. ನಾರಾಯಣಕರ್ ಸೇರಿದಂತೆ  ಸೋಮನಾಥ ಕಳ್ಳಿಮನಿ, ಅಡಿವೆಪ್ಪ ಸಾಲಗಲ್, ಸಿದ್ದು ರಾಯಣ್ಣವರ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.