ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ : ಡಿಸಿ ಡಾ.ಆನಂದ ಕೆ

Jul 24, 2025 - 22:50
 0
ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ : ಡಿಸಿ ಡಾ.ಆನಂದ ಕೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ವಿಜಯಪುರ : ವಿಜಯಪುರ ಜಿಲ್ಲಾಧಿಕಾರಿಗ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು. 

ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವು ದರಿಂದ ಸಮಯ ಹಾಗೂ ಹಣದ ಉಳಿತಾಯವಾಗಿ, ಸಾರ್ವಜನಿಕರ ಕಚೇರಿ ಅಲೆದಾಟವು ತಪ್ಪಿದಂತಾಗುತ್ತದೆ. ಇದರಿಂದ ಅತ್ಯಂತ ಅನುಕೂಲವಾಗಲಿದ್ದು, ಈ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ ಅವರು, ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿದರು. 

ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಚುನಾವಣಾ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿರುವ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ನಿಲ್ದಾಣದಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದ0ತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ನಿಲ್ದಾಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ, ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ಒದಗಿಸಬೇಕು. ಆವರಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಿರ್ವಹಣೆ ಮಾಡುವ ಜೊತೆಗೆ ಕಾಲಕಾಲಕ್ಕೆ ಸಂಬAಧಿಸಿದ ಅಧಿಕಾರಿಗಳು ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಗುಣಮಟ್ಟದ ಆಹಾರ ಪೂರೈಕೆಗೆ ಕುರಿತು ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ, ೨೫೦ ಹಾಸಿಗೆವುಳ್ಳ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯ ತಾಯಿ ಮಕ್ಕಳ ವಾರ್ಡ, ನವಜಾತ ಶಿಶು ವಿಭಾಗ, ಸಿಟಿ ಎಂಆರ್‌ಐ ಸ್ಕಾö್ಯನ್ ಸೆಂಟರ್, ನೇತ್ರ ವಿಭಾಗ, ಎನ್‌ಆರ್‌ಸಿ ಕೇಂದ್ರ, ಕ್ಷಕಿರಣ ವಿಭಾಗ, ತುರ್ತು ಘಟಕ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬ0ಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು. 

ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಆಸ್ಪತ್ತೆ ಬರುವ ರೋಗಿಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ ಉತ್ತಮ ಚಿಕಿತ್ಸೆ ಒದಗಿಸಲು ಮುಂದಾಗಬೇಕು ಎಂದು ಅವರು ಹೇಳಿದರು. ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
 
 
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.