ಮಹನೀಯರನ್ನು ಸ್ಮರಿಸುವುದು ಆದ್ಯ ಕರ್ತವ್ಯ : ಡಿಸಿ ಡಾ.ಆನಂದ.ಕೆ

Aug 15, 2025 - 22:40
 0
ಮಹನೀಯರನ್ನು ಸ್ಮರಿಸುವುದು ಆದ್ಯ ಕರ್ತವ್ಯ : ಡಿಸಿ ಡಾ.ಆನಂದ.ಕೆ
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 
 
ವಿಜಯಪುರ :   ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ  ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರಾಷ್ಟçಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ‍್ಯೋತ್ಸವದ ಶುಭಾಶಯ ಕೋರಿ, ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ವೀರ ಧೀರರ ತ್ಯಾಗ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ‍್ಯ ಸಂದಿದೆ. ಈ ಮಹನೀಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿರುವ ಗಾಂಧಿ ಭವನ ಮಾದರಿ ಎನಿಸಿದೆ. ಇಲ್ಲಿನ ಪ್ರಶಾಂತ ವಾತಾವರಣದಲ್ಲಿರುವ ಗಾಂಧಿ ಭವನವು ಪ್ರೇರಣಾ ತಾಣವಾಗಿದೆ.  ಗಾಂಧೀಜಿಯವರ ಹೋರಾಟದ ಬದುಕು,ಅವರು ಅನುಸರಿಸಿದ ತತ್ವಾದರ್ಶಗಳ ಸಮಗ್ರ ಮಾಹಿತಿ ವಿವರ ಒಳಗೊಂಡಿರುವ ಗಾಂಧಿ ಭವನವಕ್ಕೆ ಯುವಕರು, ನಾಗರಿಕರು ಭೇಟಿ ನೀಡಿ, ವೀಕ್ಷಣೆ ಮಾಡುವ ಮೂಲಕ ಅರಿತುಕೊಳ್ಳಬೇಕೆಂದು ಕರೆ ನೀಡಿದರು.
ಮಹಾತ್ಮಾ ಗಾಂಧಿ ಅವರ ವಿಚಾರಧಾರೆಗಳನ್ನು ಇಂದಿನ ಯುವಕರು ಅರಿಯುವ ಮೂಲಕ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿಗಳು ಗಾಂಧಿ ಭವನ ವೀಕ್ಷಿಸಿ,ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. 
ಈ ಸಂದರ್ಭದಲ್ಲಿ   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ವಾರ್ತಾಧಿಕಾರಿ ಅಮರೇಶ ದೊಡಮನಿ,ಗಾಂಧಿ ಭವನದ ನಿರ್ವಹಣಾ ಸಮಿತಿ ಸದಸ್ಯರಾದ ಫಿರೋಜ್ ರೋಜಿಂದಾರ, ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ,ಬಾಪುಗೌಡ ಪಾಟೀಲ ಶೇಗುಣಸಿ ಸೇರಿದಂತೆ ವಾರ್ತಾ ಇಲಾಖೆಯ ಸುರೇಶ ಅಂಬಿಗೇರ ಶ್ರೀಮತಿ ಮಂಜುಳಾ, ವೈಷ್ಣವಿ, ವಿದ್ಯಾಶ್ರೀ ಹೊಸಮನಿ, ನಾಗೇಶ ಸಾಗರ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ,ಸಿಬ್ಬಂದಿ, ವಿದ್ಯಾರ್ಥಿಗಳು, ಸಾರ್ವಜನಿಕರು  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.