ಸಂವಿಧಾನದ ಆಶಯದಂತೆ ನಡೆದುಕೊಳ್ಳೋಣ : ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ

Aug 15, 2025 - 22:49
 0
ಸಂವಿಧಾನದ ಆಶಯದಂತೆ ನಡೆದುಕೊಳ್ಳೋಣ : ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 


 ವಿಜಯಪುರ : ಜಿಲ್ಲಾ ಪಂಚಾಯತಿಯಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ ಧ್ವಜಾರೋಹಣ ನೆರವೇರಿಸಿ, ಮಾತನಾಡಿದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು, ನಮ್ಮ ದೇಶ ಸ್ವಾತಂತ್ರ‍್ಯ ಹೊಂದಲು ಹಲ ಮಹನೀಯರು ತಮ್ಮ ತ್ಯಾಗ ಮಾಡಿದ್ದಾರೆ. ಕೆಲವರು ತಮ್ಮ ಅಮೂಲ್ಯವಾದ ದಿನಗಳನ್ನು ದೇಶಕ್ಕಾಗಿ ಸೆರೆಮನೆಯಲ್ಲಿ ಕಳೆದಿದ್ದಾರೆ. ಅಂತಹ ಮಹನೀಯರ  ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

                 
ಅದರಂತೆ,ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡಿ, ಮುಂದಿನ ಪಿಳಿಗೆಗೆ ನೀಡುವುದು ಸಹ ನಮ್ಮ ಆದ್ಯ ಕರ್ತವ್ಯವಾಗಬೇಕು. ನಾವೆಲ್ಲರೂ ಸಂವಿಧಾನದ ಆಶಯದಂತೆ ನಡೆದುಕೊಳ್ಳೋಣ. ಮಹಾನ್ ನಾಯಕರು ಹಾಕಿ ಕೊಟ್ಟ ಆದರ್ಶ ಮಾರ್ಗದಲ್ಲಿ ನಡೆಯುವ ಮೂಲಕ ಸದೃಢ ದೇಶ ನಿರ್ಮಾಣ ಮಾಡೋಣ. ದೇಶದ ಪ್ರತಿ ನಾಗರಿಕರು ಸಹ ಹಳ್ಳಿಗಳ ದೇಶವಾದ ನಮ್ಮ ಭಾರತದ ಅಭಿವೃದ್ಧಿಗಾಗಿ ಕೈಜೋಡಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪರಿಸರದ ಸುಸ್ಥಿರತೆ ಮತ್ತು ಜಲ ಸಂರಕ್ಷಣೆಯ ದೃಷ್ಠಿಯಿಂದ ಸಮಗ್ರವಾಗಿ ಅನುಷ್ಠಾನ ಮಾಡಿರುವ ಎಲ್ಲಾ ಅಮೃತ ಸರೋವರಗಳ ದಡದಲ್ಲಿ ನಮ್ಮ ರಾಷ್ಟ್ರೀಯ ಏಕತೆ ಮತ್ತು ಸಾರ್ವಭೌಮತ್ವ ಹಾಗೂ ಜಲ ಸಂರಕ್ಷಣೆಯ ಮಹತ್ವ ಸಾರುವ ಉದ್ದೇಶದಿಂದ "ಒಂದು ಸರೋವರ-ಒಂದು ಸಂಕಲ್ಪ, ಜಲ ಸಂರಕ್ಷಣೆಗೆ" ಎಂಬ ಘೋಷ ವಾಕ್ಯದಂತೆ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ ಎಂದರು.                    

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ.ಕುಂಬಾರ, ಸಹಾಯಕ ಕಾರ್ಯದರ್ಶಿ ಎ.ಕೆ.ಚಲವಾದಿ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಮಕ್ಕಳು ಸೇರಿದಂತೆ ಇತರರು ಹಾಜರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.