ಸ್ವಾತಂತ್ರ್ಯ ಕಾಪಾಡಿಕೊಳ್ಳುವ ಶಕ್ತಿ ಶಿಕ್ಷಣದಲ್ಲಿದೆ : ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಸ್ವ್ವಾತಂತ್ರ‍್ಯವನ್ನು ಕಾಪಾಡಿಕೊಳ್ಳುವ ಶಕ್ತಿಯು ಶಿಕ್ಷಣದಲ್ಲಿದೆ. ಶಿಕ್ಷಣವೆಂದರೆ ಕೇವಲ ಪದವಿ ಪಡೆಯುವುದು ಅಲ್ಲ — ಅದು ಚಿಂತನೆಗೆ ಬಲ, ಸಮಾಜಕ್ಕೆ ದೃಷ್ಟಿ, ಮತ್ತು ವ್ಯಕ್ತಿತ್ವಕ್ಕೆ ದಿಕ್ಕು ನೀಡುತ್ತದೆ. ಮಹಿಳೆಯರು ಶಿಕ್ಷಣದ ಮೂಲಕ ಸ್ವಾವಲಂಬಿಗಳಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ೭೯ನೇ ಸ್ವಾತ್ರಂತ್ರö್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮಹಿಳಾ ವಿಶ್ವವಿದ್ಯಾಲಯವು ಮಹಿಳೆಯರ ಶೈಕ್ಷಣಿಕ, ಬೌದ್ಧಿಕ, ಸಾಂಸ್ಕೃತಿಕ ಮತ್ತು ತಾಂತ್ರಿಕ ಸಬಲೀಕರಣಕ್ಕೆ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ನಾವು ಗುಣಮಟ್ಟದ ಬೋಧನೆ ಮತ್ತು ಸಂಶೋಧನೆ, ಡಿಜಿಟಲ್ ಮತ್ತು ಕೌಶಲ್ಯ ಆಧಾರಿತ ಶಿಕ್ಷಣ, ಅಂತಾರಾಷ್ಟ್ರೀಯ ಸಹಯೋಗಗಳು, ಉದ್ಯಮ-ವಿಶ್ವವಿದ್ಯಾಲಯ ಸಂಪರ್ಕ, ಗ್ರಾಮೀಣ ಮತ್ತು ಹಿಂದುಳಿದ ಮಹಿಳೆಯರ ಒಳಗೊಳ್ಳುವಿಕೆಗೆ ವಿಸ್ತರಣಾ ಚಟುವಟಿಕೆಗಳನ್ನು ಬಲಪಡಿಸುವುದರತ್ತ ನಾವು ಹೆಚ್ಚಿನ ಗಮನ ಹರಿಸಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ವಿಶ್ವವಿದ್ಯಾನಿಲಯದ ಪ್ರತಿಯೊಬ್ಬರು ಕಟಿಬದ್ಧರಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಪದವಿ ಪಡೆದು ಕೇವಲ ಉದ್ಯೋಗ ಹುಡುಕುವವಳಲ್ಲ; ಅವಳು ಸಮಾಜ ಪರಿವರ್ತನೆಗೆ ದಾರಿ ತೋರುವವಳು, ಸಂಸ್ಕೃತಿಯ ಸಂರಕ್ಷಕಿ, ವಿಜ್ಞಾನದ ಶೋಧಕಿ, ಮತ್ತು ಮಾನವೀಯ ಮೌಲ್ಯಗಳ ಹರಿಕಾರಳಾಗಬೇಕು. ಇಂದು, ೨೧ನೇ ಶತಮಾನದಲ್ಲಿ, ಮಹಿಳೆಯರ ಸ್ವಾತಂತ್ರ‍್ಯ ಅಂದರೆ ಸಮಾನ ಅವಕಾಶ, ಸುರಕ್ಷಿತ ವಾತಾವರಣ, ಮತ್ತು ನಿರ್ಬಂಧರಹಿತ ಅಭಿವ್ಯಕ್ತಿಯ ವಾತಾವರಣ ಸೃಷ್ಟಿಯಾಗಬೇಕಾಗಿದೆ. ಅಂಥ ವಾತಾವರಣ ಸೃಷ್ಟಿಸುವಲ್ಲಿ ಮಹಿಳಾ ವಿಶ್ವವಿದ್ಯಾನಿಲಯದ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಪ್ರತಿಪಾದಿಸಿದರು.
ಲಕ್ಷ್ಷಾಂತರ ಜನರ ಪ್ರಾಣ, ತ್ಯಾಗ, ಬಲಿದಾನಗಳಿಂದಾಗಿ ನಮಗೆ ಸ್ವಾತಂತ್ರö್ಯ ದೊರೆತಿದೆ. ಬ್ರಿಟಿಷರ ದಾಸ್ಯದಿಂದ ಮುಕ್ತಿ ದೊರೆತಿದೆ. ನಮ್ಮ್ಮ ಹಿರಿಯರ ತ್ಯಾಗ, ಬಲಿದಾನಗಳಿಗೆ ಅರ್ಥ ಬರಬೇಕಾದರೆ ಈ ದೇಶದ ಜನಸಾಮಾನ್ಯರ ಬದುಕು ಹಸನುಗೊಳಿಸುವ ಕಾರ್ಯ ಪೂರ್ಣಗೊಳಿಸಬೇಕಾಗಿದೆ. ಈ ಕೈಂಕರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸಿದಾಗ ಮಾತ್ರ ಸ್ವಾತಂತ್ರö್ಯ ದಿನಾಚರಣೆ ಅರ್ಥಪೂರ್ಣವಾಗುತ್ತದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಪ್ರಾಯಪಟ್ಟರು.
ಸ್ವಾತಂತ್ರö್ಯ ದಿನಾಚರಣೆ ಪ್ರತಿಯೊಬ್ಬ ಭಾರತೀಯನು ಗೌರವಪೂರ್ವಕವಾಗಿ ಆಚರಿಸಬೇಕಾದ ದಿನ. ಸ್ವಾತಂತ್ರö್ಯವನ್ಮ್ನ ಗೌರವಿಸುವ, ಎತ್ತಿ ಹಿಡಿಯುವ ಮತ್ತು ಉನ್ನತ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಮತ್ತು ಇಂದಿನ ಯುವಜನರಲ್ಲಿ ರೂಢಿಸಬೇಕಾಗಿದೆ. ಭವಿಷ್ಯದ ನಾಗರಿಕರಾಗಿರುವ ವಿದ್ಯಾರ್ಥಿಗಳಲ್ಲಿ ಮತ್ತು ಯುವ ಜನರಲ್ಲಿ ಉನ್ನತ ಮಟ್ಟದ ಮೌಲ್ಯಗಳು ರೂಢಿಗತವಾದರೆ ಮಾತ್ರ ಭವಿಷ್ಯದಲ್ಲಿ ದೇಶದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯ ಎಂಬ ಆಶಯ ವ್ಯಕ್ತಪಡಿಸಿದರು.
ಭಾರತದ ಸ್ವಾತಂತ್ರ‍್ಯ ಹೋರಾಟದಲ್ಲಿ ಮಹಿಳೆಯರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ, ಝಾಂಶಿ ರಾಣಿ ಲಕ್ಷಿö್ಮಬಾಯಿ, ಬೆಳವಡಿ ಮಲ್ಲಮ್ಮ ಮುಂತಾದವರು ಧೈರ್ಯದಿಂದ ಸ್ವಾತಂತ್ರ‍್ಯದ ಹಾದಿ ಬೆಳಗಿದರು. ಸರೋಜಿನಿ ನಾಯ್ಡು, ಸುಚೇತಾ ಕೃಪಲಾನಿ, ವಿಜಯಲಕ್ಷಿö್ಮ ಪಂಡಿತ್, ಕಮಲಾಬಾಯಿ ಚಟ್ಟೋಪಾಧ್ಯಾಯ, ಯಶೋದರಮ್ಮ ದಾಸಪ್ಪ, ಮುಂತಾದವರು ಸ್ವಾತಂತ್ರö್ಯ ಚಳವಳಿಯ ಮುಂಚೂಣಿಯಲ್ಲಿದ್ದರು. ಇವರೆಲ್ಲರ ತ್ಯಾಗ ಬಲಿದಾನಗಳಿಗೆ ಬೆಲೆ ಬರಬೇಕಾದರೆ ನಾವು ದೇಶದ ಸ್ವಾತಂತ್ರö್ಯವನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಅವರು ಸಲಹೆ ನೀಡಿದರು.
ವೇದಿಕೆಯ ಮೇಲಿದ್ದ ಗಣ್ಯರು ಮಹಾತ್ಮ ಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಮಾರಂಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಅಪ್ಸಾನಾ ಮುಲ್ಲಾ (ಪ್ರಥಮ), ಚೈತ್ರಾ ಬಿರಾದಾರ (ದ್ವಿತೀಯ) ಮತ್ತು ಲಕ್ಷಿö್ಮ ಕರ್ನಾಳ (ತೃತೀಯ) ನಗದು ಬಹುಮಾನಗಳನ್ನು ವಿತರಿಸಿದರು.
ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಹಾಗೂ ಕ್ರೀಡಾ ನಿರ್ದೇಶಕ ಹಣಮಂತಯ್ಯ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು, ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರದರ್ಶಕ ಕಲೆ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿನಿಯರು ರಾಷ್ಟçಗೀತೆ, ವಂದೇಮಾತರA ಗೀತೆ ಮತ್ತು ರಾಷ್ಟಿçÃಯ ಭಾವೈಕ್ಯೆತೆಯ ಗೀತೆಗಳನ್ನು ಹಾಡಿದರು. ಸಹಾಯಕ ಕ್ರೀಡಾ ನಿರ್ದೇಶಕ ವಿಶ್ವನಾಥ ನಡಕಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.